ಕರ್ನಾಟಕ PSI ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್‌: 4000 PSI ಹುದ್ದೆ ಖಾಲಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆ ಸೇರ ಬಯಸುವ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್‌ ಒಂದು ಕೇಳಿಬಂದಿದೆ. ಇಲಾಖೆಯಲ್ಲಿ 4000 ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿ ಇರುವ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆ ನ್ಯೂನತೆ ಸರಿಪಡಿಸುವುದು ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯ ಬಲಪಡಿಸುವುದು ನನ್ನ ಮೊದಲ ಆದ್ಯತೆ ಎಂದು ಹೋಮ್‌ ಮಿನಿಸ್ಟರ್ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಯಡಿಯೂರಪ್ಪ ರವರು ಮುಖ್ಯ ಮಂತ್ರಿ ಆಗುವುದಕ್ಕೂ ಮೊದಲು ರಾಜ್ಯದಲ್ಲಿ 33 ಸಾವಿರ ಪೊಲೀಸ್ ಹುದ್ದೆಗಳು ಖಾಲಿ ಇದ್ದವು. ಅವುಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗಿದೆ. ಪ್ರಸ್ತುತ 4 ಸಾವಿರ ಪಿಎಸ್‌ಐ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತುಂಬಿಕೊಳ್ಳುವ ಕೆಲಸ ಪ್ರಗತಿಯಲ್ಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ.

ಪ್ರಸ್ತುತ ಪೊಲೀಸ್‌ ಇಲಾಖೆಯು 402 ಮತ್ತು 545 ಪೊಲೀಸ್ ಸಬ್‌-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಸುತ್ತಿದೆ. ಅಕ್ಟೋಬರ್ 3 ರಂದು 545 ಎಸ್‌ಐ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಿದೆ.

ಮೊನ್ನೆಯಷ್ಟೇ 80 ಪಿಸಿ, 20 ಪಿಎಸ್‌ಐ ಹುದ್ದೆಗಳನ್ನು ಕ್ರೀಡಾಕೋಟಾದಡಿ ನೇಮಕ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಅಲ್ಲದೇ 250 ಪೊಲೀಸ್ ಅನುಯಾಯಿ ಹುದ್ದೆಗಳನ್ನು ನೇಮಕ ಮಾಡಲು ಜುಲೈ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!