BPL CORD: ವಾರ್ಷಿಕ ಆದಾಯ 1.20 ಲಕ್ಷ ರೂ. ಹೊಂದಿರುವವರ BPL ಕಾರ್ಡ್ ರದ್ದು

ರಾಜ್ಯ ಸರ್ಕಾರ BPL ಕಾರ್ಡ್ ಹೊಂದಿರುವವರಿಗೆ ದೊಡ್ಡ ಶಾಕ್ ನೀಡಿದೆ. ಇತ್ತೀಚೆಗೆ ಫ್ರಿಡ್ಜ್ , ಟಿವಿ ಬೈಕ್ ಇದ್ದವರ ಬಿಪಿಎಲ್ ಕಾರ್ಡ್ ಕ್ಯಾನ್ಸಲ್ ಮಾಡುವುದಾಗಿ ಸುಳಿವು ನೀಡಿದ್ದ ಸರ್ಕಾರದ ನಡೆ ವಿರುದ್ಧ ವಿಪಕ್ಷಗಳು ಹಾಗೂ ಮಧ್ಯಮ ವರ್ಗದ ಜನರು ತೀವ್ರ ಆಕ್ರೋಶ ಹೊರಹಾಕಿದ್ದರು.
ಇದೀಗ ರಾಜ್ಯದಲ್ಲಿ ವಾರ್ಷಿಕ 1.20 ಲಕ್ಷ ರೂ. ಆದಾಯ ಹೊಂದಿರುವವರ ಬಿಪಿಎಲ್ ಕಾರ್ಡ್ ದಾರರ ಕಾರ್ಡ್ ನ್ನು ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.

ಅಲ್ಲದೇ ಸಾಕಷ್ಟು ಜನ ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಅಂತವರನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿದೆ. ಆದಾಯ ತೆರಿಗೆ ಪಾವತಿ ಮಾಡುತ್ತಿರುವವರ ಬಿಪಿಎಲ್ ಕಾರ್ಡ್ ಸಹ ರದ್ದು ಮಾಡಲಾಗುತ್ತಿದೆ ಎಂದು ತಿಳಿಸಿದೆ.
ಬಡತನ ರೇಖೆಗಿಂತ ಕೆಳಗಿರುವವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬಿಪಿಎಲ್ ಕಾರ್ಡ್ ವಿತರಣೆ ಮಾಡುತ್ತೆ. ಬಿಪಿಎಲ್ ಪಡಿತರು ಮೂರು ಹೆಕ್ಟೇರ್ ಭೂಮಿಯನ್ನು ಹೊಂದಿದ್ದರೆ ಅಥವಾ ವಾರ್ಷಿಕ ಆದಾಯವು 1.28 ಲಕ್ಷ ರೂ. ಇದ್ದವರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!