ರಾಜ್ಯದಲ್ಲಿ ಮುಂದಿನ 4ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮುಂದಿನ 4 ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಸೆ., 7ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೇಂಜ್‌ ಅಲರ್ಟ್‌ ಘೋಷಿಸಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್‌, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಸೆ.8ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!