ರಾಜ್ಯದಲ್ಲಿ ಇನ್ನೂ ಎರಡು, ಮೂರು ದಿನ ಬಾರಿ ಮಳೆ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ.

ಕಳೆದ 15 ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಗುರುವಾರ ಮಳೆಯ ಆರ್ಭಟ ಕಡಿಮೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಹೇಳಿದೆ.

ಇಲಾಖೆ ವರದಿಯ ಪ್ರಕಾರ ಇದೇ ಸೆ: 21ರ ವರೆಗೂ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ಇಂದು ಮತ್ತು ನಾಳೆ ಮಳೆ ಮುಂದುವರೆಯಲಿದ್ದು, ವರುಣನ ಅಬ್ಬರ ಹೆಚ್ಚಾಗಲಿದೆ ಎಂದೂ ವರದಿ ಹೇಳಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!