ಅ. 1ರಿಂದ ಚಿತ್ರಮಂದಿರದಲ್ಲಿ ಶೇ 100ರಷ್ಟು ಆಸನ ಭರ್ತಿಗೆ ಅನುಮತಿ

ಕೋವಿಡ್‌ ದೃಢಪ್ರಮಾಣ ದರ ಶೇ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಅ. 1ರಿಂದ ಚಿತ್ರಮಂದಿರ, ಮಲ್ಟಿಪ್ಲೆಕ್ಸ್‌, ರಂಗಮಂದಿರ, ಸಭಾಂಗಣಗಳಲ್ಲಿ ಪೂರ್ಣ ಪ್ರಮಾಣದ ಆಸನಗಳನ್ನು ಭರ್ತಿಮಾಡಲು ಅನುಮತಿ ನೀಡಲಾಗಿದೆ.

ಕೋವಿಡ್‌ ದೃಢಪ್ರಮಾಣ ದರ ಶೇ 1ಕ್ಕಿಂತ ಹೆಚ್ಚಿದ್ದರೆ ಈಗ ಇರುವಂತೆ ಶೇ 50ರಷ್ಟು ಆಸನಗಳನ್ನು ಮಾತ್ರ ಭರ್ತಿ ಮಾಡಬೇಕು. ಶೇ 2ಕ್ಕಿಂತ ಹೆಚ್ಚು ಪ್ರಕರಣ ಕಂಡುಬಂದರೆ ಚಿತ್ರಮಂದಿರಗಳನ್ನು ಬಂದ್‌ ಮಾಡಬೇಕು ಎಂದು ಬೊಮ್ಮಾಯಿ ತಿಳಿಸಿದರು.

ಗರ್ಭಿಣಿಯರು ಮತ್ತು ಹಿರಿಯ ನಾಗರಿಕರು ಚಿತ್ರಮಂದಿರಗಳಿಗೆ ಬರಬಾರದು. ಚಿತ್ರಮಂದಿರದ ಪ್ರವೇಶ ದ್ವಾರದಲ್ಲಿ ದೇಹದ ಉಷ್ಣಾಂಶ ತಪಾಸಣೆ ನಡೆಸಬೇಕು. ಪ್ರತಿ ಪ್ರದರ್ಶನದ ಬಳಿಕ ಶೌಚಾಲಯಗಳೂ ಸೇರಿದಂತೆ ಇಡೀ ಚಿತ್ರಮಂದಿರವನ್ನು ಸ್ವಚ್ಛಗೊಳಿಸಬೇಕು ಎಂದು ಶುಕ್ರವಾರ ಹೊರಡಿಸಿರುವ ಕೋವಿಡ್‌ ನಿಯಂತ್ರಣ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!