ರೈತರಿಗೆ ನೆರವು: 2 ಲಕ್ಷ ಅಕ್ರಮ ವಿದ್ಯುತ್‌ ಸಂಪರ್ಕ ಸಕ್ರಮಕ್ಕೆ ಸರ್ಕಾರ ಚಿಂತನೆ

ಬೆಂಗಳೂರು: ಆರ್ಥಿಕವಾಗಿ ಹೊರೆಯಾದರೂ ರೈತರ 2 ಲಕ್ಷಕ್ಕೂ ಹೆಚ್ಚು ನೀರಾವರಿ ಪಂಪ್‌ಸೆಟ್‌ಗಳ ವಿದ್ಯುತ್‌ ಸಂಪರ್ಕವನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ವಿಧಾನಸಭೆಯಲ್ಲಿ ಇಂಧನ ಸಚಿವ ವಿ. ಸುನೀಲ್‌ಕುಮಾರ್‌ ನೀಡಿರುವ ಮಾಹಿತಿ ಪ್ರಕಾರ, 2.57 ಲಕ್ಷ ಪಂಪ್‌ಸೆಟ್‌ಗಳ ವಿದ್ಯುತ್‌ ಸಂಪರ್ಕವನ್ನು ಸಕ್ರಮಗೊಳಿಸುವಂತೆ ಅರ್ಜಿ ಸಲ್ಲಿಕೆಯಾಗಿದ್ದು, ವಿಲೇವಾರಿಗೆ ಬಾಕಿ ಇವೆ. ಈ ವರ್ಷ 22,897 ಅಕ್ರಮ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸಂಪರ್ಕ ನೀಡಲಾಗಿದೆ.

‘ವಿವಿಧ ವಿದ್ಯುತ್‌ ಪೂರೈಕೆ ಕಂಪನಿಗಳ ವ್ಯಾಪ್ತಿಯಲ್ಲಿ 2018ರಿಂದ 2020ರ ಮಧ್ಯೆ 4.41 ಲಕ್ಷ ಅಕ್ರಮ ಸಂಪರ್ಕಗಳನ್ನು ಸಕ್ರಮಗೊಳಿಸಲಾಗಿದೆ. ಹೆಸ್ಕಾಂ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಅಕ್ರಮ ಸಂಪರ್ಕಗಳನ್ನು ಸಕ್ರಮಗೊಳಿಸಲಾಗಿದೆ. ಅಕ್ರಮ ಸಂಪರ್ಕದಿಂದ ಭಾರಿ ನಷ್ಟವಾಗುತ್ತಿ‌ದೆ. ಹೀಗಾಗಿ, ಅವುಗಳನ್ನು ಸಕ್ರಮಗೊಳಿಸಲು ಚಿಂತನೆ ನಡೆದಿದೆ‘ ಎಂದು ಇಂಧನ ಇಲಾಖೆಯ ಮೂಲಗಳು ತಿಳಿಸಿವೆ

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!