ದಸರಾ ನಂತರ ಪ್ರಾಥಮಿಕ ಶಾಲೆಗಳು ಆರಂಭ

ಬೆಂಗಳೂರು: ಸರಿಸುಮಾರು ಒಂದೂವರೆ ವರ್ಷದಿಂದ ಕೋವಿಡ್ ಕಾರಣಗಳಿಗಾಗಿ ಮುಚ್ಚಲ್ಪಟ್ಟಿರುವ ಪ್ರಾಥಮಿಕ ಶಾಲೆಗಳನ್ನು ದಸರಾ ಹಬ್ಬದ ನಂತರ ಆರಂಭಿಸಲು ಸರ್ಕಾರ ಮುಂದಾಗಿದೆ. ಈಗಾಗಲೇ ರಾಜ್ಯದಲ್ಲಿ 6 ರಿಂದ 12ನೇ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ದಸರಾ ಬಳಿಕ ಶೀಘ್ರವೇ ಪ್ರಾಥಮಿಕ ಶಾಲೆ ಆರಂಭವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

1-5ನೇ ತರಗತಿಗಳ ಪ್ರಾರಂಭಕ್ಕೆ ಸರ್ಕಾರ ತಜ್ಞರ ಅಭಿಪ್ರಾಯ ಕೇಳಿದೆ. ತಜ್ಞರು ದಸರಾ ಬಳಿಕ ನೋಡೋಣ ಎಂದು ಸಲಹೆ ನೀಡಿದ್ದಾರೆ. ತಜ್ಞರ ವರದಿ ಆಧರಿಸಿ ಸರ್ಕಾರ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದೆ.

ವಾರದಲ್ಲಿ ಮೂರು ದಿನ ಮಾತ್ರ ತರಗತಿ ನಡೆಯಲಿದೆ. 3 ದಿನ ಆಫ್‍ಲೈನ್ ಮತ್ತು ಮೂರು ದಿನ ಆನ್‍ಲೈನ್ ಕ್ಲಾಸ್ ನಡೆಸಲು ಚಿಂತನೆ ನಡೆದಿದೆ. ಕಡ್ಡಾಯವಾಗಿ ಕೇವಲ ಬೆಳಗ್ಗೆ ಅವ ಮಾತ್ರ ತರಗತಿ ನಡೆಯಲಿದ್ದು, ವಿದ್ಯಾರ್ಥಿಗಳು ಹೆಚ್ಚಿರುವ ಕಡೆ 3+3 ದಿನ ತರಗತಿ ನಡೆಸಲು ಅನುಮತಿ ನೀಡುವ ಸಾಧ್ಯತೆಯಿದೆ.

ಶಾಲೆಗೆ ಹಾಜರಾತಿ ಕಡ್ಡಾಯ ಅಲ್ಲ. ಶಾಲೆಯಲ್ಲಿ ಕೊರೊನಾ ನಿಯಮ ಜಾರಿ ಸಂಬಂಧ ತಜ್ಞರ ವರದಿ ಆಧರಿಸಿ ವಿಶೇಷ ಮಾರ್ಗಸೂಚಿ ಪ್ರಕಟ ಮಾಡಿ ಆರಂಭಿಸಲು ಚಿಂತನೆ ನಡೆದಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!