ರಾಜ್ಯದಲ್ಲಿ ಅ.3ರ ವರೆಗೆ ಭಾರೀ ಮಳೆ

ಬೆಂಗಳೂರು: ಶಾಹೀನ್ ಚಂಡಮಾರುತ ಹಿನ್ನೆಲೆ ಇಂದಿನಿಂದ ಅಕ್ಟೋಬರ್ 3 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಶಾಹೀನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಇಂದಿನಿಂದ ಕರ್ನಾಟಕದಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಅ.3ರ ವರೆಗೂ ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ

ಇಂದಿನಿಂದ ಅ.3 ರವರೆಗೆ ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಬೀದರ್, ಕಲಬುರ್ಗಿ, ವಿಜಯಪುರದಲ್ಲಿ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!