ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಕೊರಟಗೆರೆ ತಾಲ್ಲೂಕಿನ ಸಿ ಎನ್ ದುರ್ಗ ಹೋಬಳಿಯ ಅಜ್ಜಿಹಳ್ಳಿ ಗ್ರಾಮದಲ್ಲಿ ಟಿ.ಆರ್ ತಿಮ್ಮರಾಜು ಬಿನ್ ರಂಗಶಾಮಯ್ಯ ಎನ್ನುವ ವ್ಯಕ್ತಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಕೊರಟಗೆರೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ತನ್ನ ಮನೆಯಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ ಎರಡು ಬಿಳಿಯ ಚೀಲದಲ್ಲಿ ಸುಮಾರು17.280ಲೀಟರ್ ನಷ್ಟು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ನಿರೀಕ್ಷಕಿ ಶ್ರೀಲತಾ ತಿಳಿಸಿದ್ದಾರೆ..

ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಆದೇಶದ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ

ದಾಳಿಯ ಸಂದರ್ಭದಲ್ಲಿ ಸಿಬ್ಬಂದಿಗಳಾದ ಮಲ್ಲಿಕಾರ್ಜುನ್, ಮೋರಖಂಡಿ, ರಂಗಧಾಮಯ್ಯ, ಹಮೀದ್, ಮಧು, ಮಂಜುಳಾ ದಾಳಿ ವೇಳೆ ಹಾಜರಿದ್ದರು .

ವರದಿ:- ಹರೀಶ್ ಬಾಬು ಬಿ.ಹೆಚ್ ಕೊರಟಗೆರೆ

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!