ಚಂಡಮಾರುತ; ಕರ್ನಾಟಕದಲ್ಲಿ ಇನ್ನೂ 4 ದಿನ ಮಳೆ ಸಾಧ್ಯತೆ

ಬೆಂಗಳೂರು, ಶಾಹೀನ್ ಚಂಡಮಾರುತದ ಪರಿಣಾಮ ಇನ್ನೂ ನಾಲ್ಕು ದಿನ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 5 ಮತ್ತು 6ರಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಕ್ಟೋಬರ್ 5ರಂದು ಯೆಲ್ಲೋ ಅಲರ್ಟ್‌, ಅಕ್ಟೋಬರ್ 6ರಂದು ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಎಲ್ಲೆಲ್ಲಿ ಮಳೆ; ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಅಕ್ಟೋಬರ್ 6ರಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!