ಉಪ ಚುನಾವಣೆ ಎರಡು ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸ ಇದೆ: ಹೆಚ್.ಡಿ. ದೇವೇಗೌಡ

ಬೆಂಗಳೂರು: ಉಪ ಚುನಾವಣೆ ಗೆಲ್ಲುವ ವಿಶ್ವಾಸ ಇದೆ. ನನ್ನ ಮಾತಿಗೆ ಗೌರವ ಸಿಗುತ್ತದೆ ಅನ್ನೋ ವಿಶ್ವಾಸ ನನಗೆ ಇದೆ. ಎರಡು ಕ್ಷೇತ್ರದಲ್ಲಿ ಗೆಲ್ಲೋ ವಿಶ್ವಾಸವನ್ನು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉಪಚುನಾವಣೆ ಕುರಿತಾಗಿ ಮಾತನಾಡಿದ್ದಾರೆ. ಎರಡು ಕಡೆ ಮುಸ್ಲಿಂ ಅಭ್ಯರ್ಥಿ ಹಾಕಿದ್ದೇವೆ. ಬಸವಕಲ್ಯಾಣದಲ್ಲೂ ನಾವು ಮುಸ್ಲಿಂ ಅಭ್ಯರ್ಥಿ ಹಾಕಿದ್ದೇವೆ. ನಾರಾಯಣರಾವ್ ನನ್ನ ಶಿಷ್ಯನೇ ಆಗಿದ್ದಾನೆ. ಆದರೆ ನಾನು ಯಾರನ್ನು ಜಾತಿ ಮೇಲೆ ಬೆಳೆಸಲಿಲ್ಲ. ಅವತ್ತು ಕೂಬಾ ಅನ್ನೋರನ್ನ ಚುನಾವಣೆ ನಿಲ್ಲಲು ಹೇಳಿದ್ದೆವು. ಆದರೆ ಅವರು ಒಪ್ಪಲಿಲ್ಲ. ಹೀಗಾಗಿ ಅನಿವಾರ್ಯವಾಗಿ ಮುಸ್ಲಿಂ ಅಭ್ಯರ್ಥಿ ಹಾಕಿದ್ದು ಯಾವುದೇ ಜಾತಿ ಆಧಾರದಲ್ಲಿ ಹಾಕಿಲ್ಲ ಎಂದು ಹೇಳಿದ್ದಾರೆ

ಸಿಂದಗಿಯಲ್ಲಿ ಮೊದಲು ಜೆಡಿಎಸ್ ನಿಂದ ಟಿಕೆಟ್ ಕೊಟ್ಟವನು ನಾನೇ. ಅವಿಭಾಜ್ಯ ಬಿಜಾಪುರ ಆಗಿತ್ತು. ನಾನು ಬಿಜಾಪುರದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನ ಗೆಲ್ಲಿಸಿದ್ದೇನೆ. ಕಾಂಗ್ರೆಸ್ ಅವರು ಒಬ್ಬೇ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಈವರೆಗೂ ಗೆಲ್ಲಿಸಿಲ್ಲ. ನಾನು ಸಿಂದಗಿ ನೀರಾವರಿ ಯೋಜನೆ ಕೊಟ್ಟಿದ್ದೇನೆ. ಇದಕ್ಕಾಗಿ ನನ್ನ ಪ್ರತಿಮೆ ಅಲ್ಲಿ ಸ್ಥಾಪನೆ ಮಾಡಿದ್ದಾರೆ. ನಾನು ನೀರಾವರಿ ಯೋಜನೆ ಕೊಟ್ಟಿದ್ದಕ್ಕೆ ಪ್ರತಿಮೆ ಮಾಡಿಸಿದ್ದಾರೆ. ಮನುಗುಳಿ ಸತ್ತ ಮೇಲೆ ನನ್ನ ಅಭ್ಯರ್ಥಿಯನ್ನ ಕಾಂಗ್ರೆಸ್ ಅವರು ಕರೆದುಕೊಂಡು ಹೋಗಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ದೇವೇಗೌಡ ಕಿಡಿ ಕಾರಿದ್ದಾರೆ.

ವಿಜಯಪುರದಲ್ಲಿ ಕಾಂಗ್ರೆಸ್ ಎಷ್ಟು ಮುಸ್ಲಿಂ ನಾಯಕರನ್ನು ಗೆಲ್ಲಿಸಿದ್ದಾರೆ. ಇವರು ಅಲ್ಪಸಂಖ್ಯಾತರ ಬಗ್ಗೆ ಚರ್ಚೆ ಮಾಡುತ್ತಾರೆ. ಮನಗೂಳಿಗೆ ಮನೆ ಮಗನಂತೆ ಬೆಳೆಸಿಕೊಂಡು ಬಂದೆ. ಜೀವನದ ಕೊನೆ ಹಂತದಲ್ಲಿದ್ದ ಮನಗೂಳಿಗೆ ಮಂತ್ರಿ ಮಾಡು ಎಂದೆ. ಸಿಂದಗಿಗೆ ಆಲಮಟ್ಟಿಯಿಂದ ನೀರು ಕೊಟ್ಟ ಕಾರಣ ಪ್ರತಿಮೆ ಮಾಡಿಸಿದ್ದ. ಹೆಗಡೆ ಸಿಎಂ ಇದ್ದಾಗ, ಅಧಿವೇಶನದಲ್ಲಿ ಮನಗೂಳಿ ಮಾತನಾಡಿದ್ದರು. ನಿಮ್ಮಪ್ರತಿಮೆ ಮಾಡುತ್ತೇನೆ ಎಂದು ಮನಗೂಳಿ ಹೇಳಿದ್ದರು. ಸಿಎಂ ಹೆಗಡೆ ಅವರಿಂದಲೇ ಪ್ರತಿಮೆಗೆ ಶಂಕುಸ್ಥಾಪನೆ ಮಾಡಿದ್ದರು ಎಂದಿದ್ದಾರೆ

ಕಾಂಗ್ರೆಸ್ ಅವರು ಬಿಜೆಪಿ ಗೆಲ್ಲಿಸೋ ಟಿಕೆಟ್ ಕೊಟ್ಟಿದ್ದೇನೆ ಅಂತಾರೆ. ನಾನೇ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ. ಮನೆ ಮನೆಗೆ ಹೋಗಿ ನಾನು ಮತ ಯಾಚನೆ ಮಾಡುತ್ತೇನೆ. ಕೊನೆ ಕಾಲದಲ್ಲಿ ನಿಮ್ಮ ಮನಗೆ ಬಂದಿದ್ದೇನೆ ಮತ ಹಾಕಿ ಅಂತ ಕೇಳುತ್ತೇನೆ. ನಾನು ಸುಮ್ಮನೆ ಕೂರೋದಿಲ್ಲ. ಮುಸ್ಲಿಂಮರಿಗೆ ನಾನು ಏನು ಮಾಡಿದ್ದೇನೆ ಅಂತ ಎಲ್ಲರಿಗೂ ಗೊತ್ತು. ನಾನೇ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ. ಕಾಂಗ್ರೆಸ್ ವಿರುದ್ಧ ದೇವೇಗೌಡ ಆಕ್ರೋಶ ಹೊರ ಹಾಕಿದ್ದಾರೆ. ಕಾಂಗ್ರೆಸ್ ಅಪ ಪ್ರಚಾರ ಮಾಡುತ್ತಿದೆ. ಪ್ರಾದೇಶಿಕ ಪಕ್ಷ ಅಂತ ಮುಗಿಸಲು ಹೋದರೆ ನಾವು ಅದರ ವಿರುದ್ಧ ಈಜುತ್ತೇವೆ. ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷ. ಅದರ ಪರಿಸ್ಥಿತಿ ಏನ್ ಆಗುತ್ತಿದೆ ಅಂತ ನೋಡುತ್ತಿದ್ದೇವೆ ಎಂದು ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!