ಅ.13ರವರೆಗೂ ರಾಜ್ಯದಲ್ಲಿ ಭಾರಿ ಮಳೆ, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, : ರಾಜ್ಯದಲ್ಲಿ ಅಕ್ಟೋಬರ್ 13ರವರೆಗೂ ಮಳೆ ಮುಂದುವರೆಯಲಿದ್ದು, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ಐದು ದಿನ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ಐದು ದಿನ ಯೆಲ್ಲೋ ಅಲರ್ಟ್‌ ನೀಡಲಾಗಿದೆ

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಅ.9ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ.

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೆ ಮಳೆ ಆರಂಭವಾಗಿದ್ದು, ಕೆಲ ಪ್ರದೇಶಗಳಲ್ಲಿ ಜಿಟಿಜಿಟಿ ಮಳೆ ಇದ್ದರೆ, ಇನ್ನು ಕೆಲವೆಡೆ ಹೆಚ್ಚಿನ ಮಳೆಯಾಗುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಳೆಗಾಲದ ನಿರ್ವಹಣೆಗಾಗಿ 63 ಉಪವಿಭಾಗಗಳಲ್ಲಿ ತಾತ್ಕಾಲಿಕ ನಿಯಂತ್ರಣ ಕೊಠಡಿಯನ್ನು ಆರಂಭಿಸಿದೆ. ಅಕ್ಟೋಬರ್ ಅಂತ್ಯದವರೆಗೂ ಈ ನಿಯಂತ್ರಣ ಕೊಠಡಿಗಳು ಕಾರ್ಯ ನಿರ್ವಹಿಸಲಿವೆ ಎಂದು ಬಿಬಿಎಂಪಿ ತಿಳಿಸಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!