ಸಿದ್ದರಾಮಯ್ಯಗೆ ಹೊಸ ಕನಸು ಬಿದ್ದ ಆಗಿದೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸಿದ್ದಕಲೆʼಯ ನಿಷ್ಣಾತರಿಗೆ ಹೊಸ ಕನಸು ಬಿದ್ದ ಹಾಗಿದೆ ಎಂದು ಹೇಳುವ ಮೂಲಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ಮುಂದುವರೆಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ವ್ಹೀಕ್ ಆಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಗಲು ಕನಸು ಕಾಣುವವರಿಗೆ ನನ್ನ ಅನುಕಂಪವಿದೆ. ಜೆಡಿಎಸ್ ಮತ್ತು ಹೆಚ್ ಡಿ ಕುಮಾರಸ್ವಾಮಿ ಬಗ್ಗೆ ಮಾತನಾಡುವುದಿಲ್ಲ ಎನ್ನುತ್ತಲೇ ಮತ್ತೆ ಮತ್ತೆ ಅವರು ಅದೇ ಜಪ ಮಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಜೆಡಿಎಸ್ ಬಗ್ಗೆ ಮಾತನಾಡಲ್ಲ ಅಂತೀರಿ. ಮತ್ಯಾಕೆ ನಮ್ಮ ಬಗ್ಗೆ ಮಾತು? ಬಿಜೆಪಿಯವರು ನಿಮ್ಮ ಹೇಳಿಕೆಗಳಿಗೆ ಕ್ಯಾರೆೇ ಅನ್ನುವುದಿಲ್ಲ. ನಮ್ಮ ಬಗ್ಗೆ ಮಾತನಾಡದಿದ್ದರೆ ನಿಮಗೆ ಗತಿಯೇ ಇಲ್ಲ. ನಿಮ್ಮ ರಾಜಕೀಯ ಉಳಿವಿಗಾಗಿ ನನನ್ನು, ದೇವೇಗೌಡರನ್ನು ಟೀಕೆ ಮಾಡುವುದು ನಿಮಗೆ ಅನಿವಾರ್ಯ. ಅದು ತಪ್ಪಿದರೆ ನಿಮಗೆ ಬೇರೆ ವಿಧಿ ಇಲ್ಲ. ಕಾಂಗ್ರೆಸ್ ನಲ್ಲಿ ನಿಮಗೆ ಮೂರು ಕಾಸಿನ ಬೆಲೆ ಇಲ್ಲ ಎಂದು ಕುಮಾರಸ್ವಾಮಿ ಟೀಕಾ ಪ್ರಹಾರ ನಡೆಸಿದ್ದಾರೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!