ರೈತರ ಖಾತೆಗೆ ಸರ್ಕಾರದಿಂದ ಬೆಳೆ ಹಾನಿ’ಯ ಪರಿಹಾರ ಹಣ : ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು:ರಾಜ್ಯದಲ್ಲಿ ವ್ಯಾಪಕ ಮಳೆಯಿಂದ ಬೆಳೆ ಹಾನಿ ಆಗಿರುವ ಹಿನ್ನೆಲೆಯಲ್ಲಿ ರೈತರ ಖಾತೆಗೆ ಸರ್ಕಾರದಿಂದ ಪರಿಹಾರ ಹಣ ನೀಡಲಾಗುವುದು ಎಂದು ಕೃಷಿಸಚಿವ ಬಿ . ಸಿ . ಪಾಟೀಲ್ ಹೇಳಿದ್ದಾರೆ .

ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಳೆ ಹಾನಿ ಬಗ್ಗೆ ತಕ್ಷಣ ಸರ್ವೆ ನಡೆಸುವಂತೆ ಸೂಚಿಸಿದ್ದೇನೆ, ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್‌ನಿಂದ ( SDRF , NDRF ) ಪರಿಹಾರ ಹಂಚಿಕೆ ಮಾಡಲಾಗುವುದು.

ರಾಜ್ಯದ ವಿವಿಧೆಡೆ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಂಗಳೂರು ಸಹಿತ ಕೆಲವು ಜಿಲ್ಲೆಗಳಲ್ಲಿ ( HEAVY RAIN ) ಧಾರಾಕಾರ ಮಳೆಯಾಗಿದೆ. ಅಪಾರ ಮಳೆ ಹಾನಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ ಎಂದರು.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!