ರಾಜ್ಯಾದ್ಯಂತ ಇನ್ನೂ 2 ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ರಾಜ್ಯಾದ್ಯಂತ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು,ಶಿವಮೊಗ್ಗ, ಕೊಡಗು, ಹಾಸನ, ದಕ್ಷಿಣ ಕನ್ನಡ, ಒಳನಾಡಿನ ತುಮಕೂರು, ಮಂಡ್ಯ ಮತ್ತು ಮೈಸೂರಿನಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ (Orange Alert) ಘೋಷಣೆ ಮಾಡಲಾಗಿದೆ.

ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಇಂದು ಯೆಲ್ಲೋ ಅಲರ್ಟ್‌ (Yellow Alert) ಘೋಷಿಸಲಾಗಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!