ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ನಾಳೆ ತುಮಕೂರು ಬಂದ್

ತುಮಕೂರು: ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ನಾಳೆ ತುಮಕೂರು ನಗರ ಬಂದ್‌ಗೆ ಕರೆ ನೀಡಿವೆ.

ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಇತರ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬಂದ್‌ಗೆ ಕರೆ ಕೊಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ಹಿಂದೂಗಳ ಮೇಲೆ ಪದೇಪದೇ ಹಲ್ಲೆ ನಡೆಯುತ್ತಿದೆ. ಗೋ ಸಂರಕ್ಷಣೆಗೆ ಮುಂದಾದವರ ಮೇಲೆ ಹಲ್ಲೆ ಮಾಡುವುದು, ಬೆದರಿಕೆ ಹಾಕುವುದು ಮುಂದುವರೆದಿದೆ. ನಗರದಲ್ಲಿ ಕಸಾಯಿ ಖಾನೆಗಳು ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್‌ಗೆ ಕರೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!