ಜನತೆಗೆ ಸಿಹಿ ಸುದ್ದಿ: ಅಡುಗೆ ಎಣ್ಣೆ, ಈರುಳ್ಳಿ ಸೇರಿ ಅಗತ್ಯ ವಸ್ತು ದರ ಇಳಿಕೆ

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ದೀಪಾವಳಿ ಹಬ್ಬದ ಹೊತ್ತಲ್ಲಿ ಈರುಳ್ಳಿ ಮತ್ತು ಅಡುಗೆ ಎಣ್ಣೆ ದರ ಇಳಿಕೆಯಾಗಲಿದೆ. ಖಾದ್ಯ ತೈಲ, ಈರುಳ್ಳಿ ಮೊದಲಾದ ಅಗತ್ಯ ವಸ್ತುಗಳ ದರ ಇಳಿಕೆಯಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಈ ಬಗ್ಗೆ ಮಾಹಿತಿ ನೀಡಿ, ಮಾರುಕಟ್ಟೆಗೆ ಹೊಸ ಈರುಳ್ಳಿ ಬರುತ್ತಿದ್ದು, ಬೆಲೆ ಕಡಿಮೆಯಾಗಲಿದೆ. ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಅಲ್ಲದೇ ರಾಜ್ಯಗಳು ಮುಂದಿನ ವಾರದಿಂದ ಅಡುಗೆ ಎಣ್ಣೆ ದಾಸ್ತಾನು ಮೇಲೆ ಮಿತಿ ಹೇರಲು ಆರಂಭಿಸುವುದರಿಂದ ಬೆಲೆ ಕಡಿಮೆಯಾಗಲಿದೆ. ಖಾದ್ಯ ತೈಲವನ್ನು ಆಮದು ಮಾಡಿಕೊಳ್ಳುತ್ತಿದ್ದು, ದೇಶಕ್ಕೆ ಪೂರೈಕೆಯಾಗುತ್ತಿದ್ದಂತೆ ಬೆಲೆ ಇನ್ನಷ್ಟು ಕಡಿಮೆಯಾಗಲಿದೆ ಎನ್ನಲಾಗಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!