ಮೋಟಾರ್‌ ಸೈಕಲ್‌ನಲ್ಲಿ ಕರೆದೊಯ್ಯಲು 4 ವರ್ಷದೊಳಗಿವರನ್ನು ಮಕ್ಕಳನ್ನು ಕರೆದೊಯ್ಯಲು ಹೊಸ ನಿಯಮ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಮೋಟಾರ್‌ ಸೈಕಲ್‌ನಲ್ಲಿ ಕರೆದೊಯ್ಯಲು ಹೊಸ ಸುರಕ್ಷತಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ‘ಮೋಟಾರ್ ಸೈಕಲ್‌ ಹಿಂಬದಿಯಲ್ಲಿ ಕುಳಿತ ಮಗುವನ್ನು ಸವಾರನೊಂದಿಗೆ ಕೂಡಿಸುವಂತಹ ಸುರಕ್ಷತಾ ಪಟ್ಟಿಯನ್ನು ಒದಗಿಸಬೇಕು’ ಎಂದಿದ್ದಾರೆ.

ಹಿಂಬದಿ ಸೀಟಿನಲ್ಲಿ ಕುಳಿತು ಪ್ರಯಾಣಿಸುವ 9 ತಿಂಗಳಿಂದ 4 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಕ್ರ್ಯಾಶ್ ಹೆಲ್ಮೆಟ್ ಧರಿಸಿರಬೇಕು. 4 ವರ್ಷ ವಯಸ್ಸಿನ ಮಗುವಿನೊಂದಿಗೆ ತೆರಳುವಾಗ ಮೋಟಾರ್‌ ಸೈಕಲ್‌ನ ವೇಗವು ಗಂಟೆಗೆ 40 ಕಿ.ಮೀ.ಗಿಂತ ಹೆಚ್ಚಿರಬಾರದು’ ಎಂದವರು ತಿಳಿಸಿದ್ದಾರೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!