ರಾಜ್ಯದಲ್ಲಿ ಮತ್ತೆ ಭಾರಿ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ದೇಶದಲ್ಲಿ ಮಳೆಯ ಅಬ್ಬರ ಕಡಿಮೆಯಾಗುವಂತೆ ಕಾಣುತ್ತಿಲ್ಲ. ವರುಣನ ಅಬ್ಬರ ಮತ್ತೆ ಹೆಚ್ಚಾಗಿದೆ. ಅಕ್ಟೋಬರ್ 30 ರಿಂದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಕ್ಟೋಬರ್ 30 ಮತ್ತು 31 ರಂದು ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅ.29ಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ದಾವಣಗೆರೆ, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯಲ್ಲಿ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ.

ಅ.30ಕ್ಕೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೂ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!