ಕನ್ನಡ ಚಿತ್ರರಂಗದ ಯುವರತ್ನ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್‌ವುಡ್(Sandalwood) ಸ್ಟಾರ್ ನಟ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ 46 ವರ್ಷದ ನಟ ತಮ್ಮ ಮನೆಯಲ್ಲಿ ಜಿಮ್ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದರು. ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮನೆಯಲ್ಲಿಯೇ ನಟ ಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ಕುಸಿದುಬಿದ್ದಿದ್ದಾರೆ. ನಟನನ್ನು ಆಪ್ತರು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಿದ್ದರು. ನಟ ಶಿವರಾಜ್ ಕುಮಾರ್ ಅವರು ಭಜರಂಗಿ ಸಿನಿಮಾ ರಿಲೀಸ್ ಹಿನ್ನೆಲೆ ಥಿಯೇಟರ್‌ನಲ್ಲಿದ್ದರು. ಅಲ್ಲಿಂದ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿಸೇರಿದಂತೆ ಬಹಳಷ್ಟು ಗಣ್ಯರು ಆಸ್ಪತ್ರೆಗೆ ಆಗಮಿಸಿದ್ದಾರೆ. ಬಹಳಷ್ಟು ಜನ ಅಭಿಮಾನಿಗಳು ನಟ ದಾಖಲಾಗಿದ್ದ ಆಸ್ಪತ್ರೆ ಬಳಿ ಸೇರಿದ್ದರು. ನಟನಿಗೆ ಗುರುವಾರ ರಾತ್ರಿಯೇ ಸುಸ್ತು ಇತ್ತು ಎನ್ನಲಾಗಿದೆ. ಬೆಳಗ್ಗೆ 11 ಗಂಟೆಯ ಹೊತ್ತಿಗೆ ನಟನನ್ನು ಹತ್ತಿರದ ಕ್ಲಿನಿಕ್‌ಗೆ ಕರೆದೊಯ್ಯಲಾಗಿತ್ತು. ನಂತರ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ನಟ ಪತ್ನಿ ಗೀತಾ ಅಶ್ವಿನಿ ರೇವಂತ್ ಹಾಗೂ ಇಬ್ಬರು ಪುತ್ರಿಯರಾದ ದೃತಿ, ವಂದಿತಾ ಮತ್ತು ಕುಟುಂಬ, ಸ್ನೇಹಿತರು ಸೇರಿ ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ್ದಾರೆ.

ಕನ್ನಡ ಸಿನಿರಂಗದ ವರನಟ ಡಾ. ರಾಜ್‌ಕುಮಾರ್‌ ಅವರ ಕಿರಿಯ ಪುತ್ರ ಪುನೀತ್‌ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ಯುವರತ್ನ ಸಿನಿಮಾ ಭಾರೀ ಹಿಟ್ ಆಗಿತ್ತು. ಚಿತ್ರ ಹಲವಾರು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಪುನೀತ್ ರಾಜ್‌ಕುಮಾರ್ ಅವರ ಸಾವಿನ ನಂತರ ಅವರ ಮನೆಯ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಹಾಗೆಯೇ ವಿಕ್ರಮ್ ಆಸ್ಪತ್ರೆಯ ಸುತ್ತಲೂ ಭಾರೀ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಅವರ ಅನಾರೋಗ್ಯದ ಸುದ್ದಿ ಹೊರಬಿದ್ದ ತಕ್ಷಣ ಗುರುದತ್, ರವಿಚಂದ್ರನ್ ಸೇರಿದಂತೆ ಉದ್ಯಮದ ಎಲ್ಲಾ ದಿಗ್ಗಜರು ಅವರನ್ನು ಭೇಟಿ ಮಾಡಲು ಆಸ್ಪತ್ರೆಗೆ ಬಂದಿದ್ದರು.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!