ಪುನೀತ್ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ಮಗಳು ಧೃತಿ

ಬೆಂಗಳೂರು: ಪುನೀತ್ ಪಾರ್ಥಿವ ಶರೀರ ಕಂಡು ಅವರ ಹಿರಿಯ ಪುತ್ರಿ ಧೃತಿ ಕಣ್ಣೀರಿಟ್ಟರು.

ಅಪ್ಪನ ತಲೆಯ ಮೇಲೆ ಕೈ ನೇವರಿಸಿದ ಅವರು ಬಿಕ್ಕಿ ಬಿಕ್ಕಿ ಅತ್ತರು ಈ ದೃಶ್ಯ ನೋಡುಗರ ಮನ ಕಲಕುವಂತಿತ್ತು.

ಪುನೀತ್ ಪತ್ನಿ ಅಶ್ವಿನಿ ಹಾಗೂ ಕಿರಿಯ ಪುತ್ರಿ ಕೂಡ ಗದ್ಗದಿತರಾದರು.

ಅಮೆರಿಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಅವರು, ಇಂದು ಮಧ್ಯಾಹ್ನ ನ್ಯೂಯಾರ್ಕ್‌ನಿಂದ ದೆಹಲಿಗೆ ಆಗಮಿಸಿದ್ದರು. ಅಲ್ಲಿಂದ ಸಂಜೆ ಬೆಂಗಳೂರಿಗೆ ಬಂದರು.

ಕಂಠೀರವ ಸ್ಟುಡಿಯೊದಲ್ಲಿ ನಾಳೆ ರಾಜ್‌ಕುಮಾರ್, ಪಾರ್ವತಮ್ಮ ರಾಜ್‌ಕುಮಾರ್ ಅವರ ಸಮಾಧಿ ಪಕ್ಕದಲ್ಲೇ ಅಂತ್ಯಸಂಸ್ಕಾರ ನೆರವೇರಲಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!