ಎಲ್ಲರೂ ಒಟ್ಟಾಗಿ ಪಕ್ಷವನ್ನು ಬಲಪಡಿಸುತ್ತೇವೆ: ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ಸಿಂದಗಿಯಲ್ಲಿ ನಿರೀಕ್ಷೆ ಮೀರಿ ಗೆಲುವು ಸಾಧಿಸಿದ್ದೇವೆ. 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದೇವೆ. ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಾನಗಲ್ ನಲ್ಲಿ ತುಂಬಾ ನಿರೀಕ್ಷೆ ಇತ್ತು.

ಯಾಕೆ ಹಿನ್ನಡೆಯಾಗಿದೆ ಎಂಬುದು ಗೊತ್ತಿಲ್ಲ. ಕಾಂಗ್ರೆಸ್ ನಾಯಕರು ಯಾಕೆ ಹಿಗ್ಗುತ್ತಿದ್ದಾರೆ ಎಂದು ತಿಳಿದಿಲ್ಲ. ಸಿದ್ದರಾಮಯ್ಯ ಬೀಗುವ ಅವಶ್ಯಕತೆ ಇಲ್ಲ. ಮುಂದಿನ ವಿಧಾನಸಭಾ ಚುನಾವಣೆಗೆ ಇದು ದಿಕ್ಸೂಚಿಯಾಗುವುದಿಲ್ಲ ಎಂದರು.

ಸಿಎಂ ಬಸವರಾಜ್ ಬೊಮ್ಮಾಯಿ ನಾಯಕತ್ವದ ಪ್ರಶ್ನೆ ಉದ್ಭವಿಸುವುದಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿದ್ದೇವೆ. ಸೋಲು, ಗೆಲುವನ್ನು ಸಮಾನವಾಗಿ ಹಂಚಿಕೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ ಪಕ್ಷವನ್ನು ಬಲಪಡಿಸುತ್ತೇವೆ. ಹಾನಗಲ್ ನಲ್ಲಿ ಯಾಕೆ ಹಿನ್ನಡೆಯಾಯ್ತು ಎನ್ನುವುದನ್ನು ಎಲ್ಲರೂ ಕುಳಿತು ಚರ್ಚಿಸುತ್ತೇವೆ ಎಂದು ಹೇಳಿದರು.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!