ಹೆಚ್ಡಿಕೆ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಎಸ್.ಆರ್.ಶ್ರೀನಿವಾಸ್ ನಿಲ್ಲಿಸಲಿ: ಬಿ.ಎಸ್.ನಾಗರಾಜು

ಗುಬ್ಬಿ : ಪಟ್ಟಣದಲ್ಲಿ ನೆನ್ನೆ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಜೆಡಿಎಸ್ ಪಕ್ಷದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿಯಾಗಿ ಮಾತುಗಳಾನ್ನಾಡಿರುವುದು ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರಲ್ಲಿ ಬೇಸರ ಮೂಡಿಸಿದೆ ಎಂದು ಜೆಡಿಎಸ್ ಮುಖಂಡ ಬಿ.ಎಸ್ ನಾಗರಾಜ್ ವಿಷಾದ ವ್ಯಕ್ತಪಡಿಸಿದರು.

ಪಟ್ಟಣದ ಸುಭಾಷ್ ನಗರದ ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ದೇವೇಗೌಡರ ಸೋಲಿಗೆ ಶಾಸಕ ಎಸ್.ಆರ್.ಶ್ರೀನಿವಾಸ್ ಅವರೇ ಕಾರಣ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿರುವ ವಿಚಾರವಾಗಿದೆ. ಈ ವಿಚಾರವನ್ನು ಸಮಾವೇಶದಲ್ಲಿ ಕುಮಾರ ಸ್ವಾಮಿಯವರು ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಯಾದವ ಮುಖಂಡ ಎ.ಕೃಷ್ಣಪ್ಪ ಅವರ ಸೋಲಿಗೆ ಕಾರಣ ಯಾರೆಂದು ಮಾಧ್ಯಮದಲ್ಲಿ ಬಿತ್ತರವಾಗಿದೆ.

ಶಾಸಕರ ಮತ್ತು ಕುಮಾರಸ್ವಾಮಿ ಅವರ ನಡುವೆ ಏನೇ ಭಿನ್ನಾಭಿಪ್ರಾಯಗಳಿದ್ದಲ್ಲಿ ಕುಳಿತು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲಿ ಇದಕ್ಕೆ ನಾನು ಮಧ್ಯಸ್ಥಿಕೆ ವಹಿಸಲು ಸಿದ್ದನಿದ್ದೇನೆ. ನಾನು ಗುಬ್ಬಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಬಂದಿಲ್ಲಾ ಎಲ್ಲಿಯೂ ಕೂಡ ಕುಮಾರಣ್ಣ ಅಧಿಕೃತವಾಗಿ ಹೇಳಿಕೆ ನೀಡಿಲ್ಲ ಜೆಡಿಎಸ್ ಪಕ್ಷಕ್ಕೆ ಸಾಮಾನ್ಯ ಕಾರ್ಯಕರ್ತನಾಗಿ ಸೇರ್ಪಡೆಗೊಂಡು ಪ್ರಾದೇಶಿಕ ಪಕ್ಷದ ಸಿದ್ದಾಂತವನ್ನು ಒಪ್ಪಿ ಮತ್ತು ಮುಂಬರುವ ಚುನಾವಣೆಯಲ್ಲಿ ಪಕ್ಷ ಸಂಘಟನೆ ಮತ್ತು ಕುಮಾರಣ್ಣ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡುವ ನಿಟ್ಟಿನಲ್ಲಿ ಕ್ಷೇತ್ರ ಪ್ರವಾಸ ಕೈಗೊಂಡಿದ್ದೇನೆ.

ನೀವು ಮೂರು ಬಾರಿ ಜೆಡಿಎಸ್ ಪಕ್ಷದ ಗುಬ್ಬಿ ಶಾಸಕರಾಗಿ ಆಯ್ಕೆಯಾದ ನೀವು ಸಚಿವಾರಗಿ ಕೂಡ ಜನಸೇವೆ ಮಾಡಿದ್ದೀರಿ ಪಕ್ಷದ ವರಿಷ್ಠರೊಂದಿಗಿನ ಬಿನ್ನಾಭಿಪ್ರಾಯಗಳನ್ನ ಒಂದು ಚೌಕ್ಕಟ್ಟಿನಲ್ಲಿ ಬಗೆಹರಿಸಿಕೊಂಡು ಈಗಲೂ ಜೆಡಿಎಸ್ ಪಕ್ಷ ಕಟ್ಟುವ ಕೆಲಸ ಮುಂದುವರೆಸಿ ನಾನು ಕೂಡ ಸಾಮಾನ್ಯ ಕಾರ್ಯಕರ್ತನಾಗಿ ನಿಮ್ಮೊಂದಿಗೆ ಸಂಘಟನೆಗೆ ಶ್ರಮಿಸುತ್ತೇನೆ. ಚುನಾವಣಾ ಸಂಧರ್ಭದಲ್ಲಿ ಟಿಕೆಟ್ ಕೊಡುವುದು ವರಿಷ್ಠರ ನಿರ್ಧಾರಕ್ಕೆ ಬಿಟ್ಟಿದ್ದು ಟಿಕೆಟ್ ಯಾರಿಗೇ ನೀಡಿದರು ನಾನು ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದರು.

ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಡಿ.ಸುರೇಶ್ ಗೌಡ ಮಾತನಾಡಿ ಜೆಡಿಎಸ್ ಪಕ್ಷದ ಶಾಸಕರಾಗಿ ಪಕ್ಷದ ನಾಯಕ ಕುಮಾರಣ್ಣ ವಿರುದ್ಧ ಕೀಳುಮಟ್ಟದ ಭಾಷೆ ಮಾತನಾಡುವುದು ಸರಿಯಲ್ಲ ಸ್ವಾಭಿಮಾನದ ಬಗ್ಗೆ ಮಾತನಾಡುವ ಶಾಸಕರು ಸ್ವಾಭಿಮಾನದಿಂದಲೇ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ ಮಾತನಾಡಲಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಸದಸ್ಯ ಜಿ.ಎಂ.ಶಿವಲಿಂಗಯ್ಯ, ಮುಖಂಡರಾದ ಸಿ.ಗಂಗಣ್ಣ, ಕೊಡಗೀಹಳ್ಳಿ ರಾಘವೇಂದ್ರ, ಲಕ್ಷ್ಮೀಕಾಂತ, ರಂಜಿತ್, ಗೋಪಾಲ್ ಗೌಡ ಇತರರು ಇದ್ದರು.

You May Also Like

error: Content is protected !!