ಪೆಟ್ರೋಲ್, ಡೀಸೆಲ್ ಬೆಲೆ ಇಂದು ಸಂಜೆಯಿಂದಲೇ ಇಳಿಕೆ: ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿದ ಬೆನ್ನಲ್ಲೇ ರಾಜ್ಯದಲ್ಲೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 7 ರೂ. ಕಡಿಮೆ ಮಾಡಲು ನಿರ್ಧರಿಸಿದ್ದು, ಇಂದು ಸಂಜೆಯಿಂದಲೇ ಬೆಲೆ ಇಳಿಕೆಯಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸರ್ಕಾರ ನಿನ್ನೆ ಪೆಟ್ರೋಲ್ ಗೆ 5 ರೂ. ಡೀಸೆಲ್ ಗೆ 10 ರೂ. ಕಡಿಮೆ ಮಾಡಿ ಅಧಿಸೂಚನೆ ಹೊರಡಿಸಿದೆ. ಹೀಗಾಗಿ ನಾವು ಸಹ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 7 ರೂಪಾಯಿ ಕಡಿಮೆ ಮಾಡಲು ನಿರ್ಧರಿಸಿದ್ದೇವೆ. ಈ ಕುರಿತು ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದೇನೆ. ಇಂದು ಸಂಜೆಯಿಂದಲೇ ಬೆಲೆ ಇಳಿಕೆಯಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಿಂದ ರಾಜ್ಯದ ಬೊಕ್ಕಸಕ್ಕೆ 2,100 ಕೋಟಿ ರೂ. ನಷ್ಟವಾಗಲಿದೆ. ಬೆಲೆ ಇಳಿಕೆ ಮಾಡುವ ಚಿಂತನೆ ಇತ್ತು. ಇದೀಗ ಕೇಂದ್ರ ಸರ್ಕಾರ ದೇಶದ ಜನರಿಗೆ ದೀಪಾವಳಿ ಉಡುಗೊರೆ ನೀಡಿರುವುದು ಖುಷಿ ತಂದಿದೆ ಎಂದರು.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!