ನವೆಂಬರ್ 16 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಪುನೀತ ನಮನ

ಬೆಂಗಳೂರು : ಇತ್ತೀಚೆಗೆ ನಮ್ಮನ್ನು ಅಗಲಿದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ನವೆಂಬರ್ 16 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಪುನೀತ ನಮನ ಕಾರ್ಯಕ್ರಮ ನಡೆಯಲಿದೆ.

ನವೆಂಬರ್ 16 ರಂದು ಅಪರಾಹ್ನ 3-30 ಗಂಟೆಗೆ ನಗರದ ಬೆಂಗಳೂರು ಅರಮನೆ ಮೈದಾನದಲ್ಲಿರುವ ನಲ್ ಪಾಡ್ ಪ್ಯಾಲೇಸ್ ಸಭಾಂಗಣದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪುನೀತ ನಮನ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರ ಸಚಿವ ಸಂಪುಟದ ಸದಸ್ಯರು, ಭಾರತೀಯ ಚಲನ ಚಿತ್ರ ರಂಗದ ಹಲವು ಪ್ರಮುಖರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!