ನ.06ರಂದು ಕೆ.ಎಸ್.ಆರ್.ಟಿ.ಸಿ.ಎಸ್ಸಿ,ಎಸ್ಟಿ ನೌಕರರಿಂದ ಅಂಬೇಡ್ಕರ್ ಜಯಂತಿ

ತುಮಕೂರು.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಸ್ಥೆ(ರಿ) ತುಮಕೂರು ವಿಭಾಗದ ವತಿಯಿಂದ ನವೆಂಬರ್ 06ರ ಶನಿವಾರ ಬೆಳ್ಳಗ್ಗೆ 10 ಗಂಟೆಗೆ ಕೆ.ಎಸ್.ಆರ್.ಟಿ.ಸಿ.. ಬಸ್ ನಿಲ್ದಾಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ ಜೀವನ ಚರಿತ್ರೆ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಸಾರಿಗೆ ಸಚಿವರು ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯಸಚಿವರಾದ ಶ್ರೀರಾಮುಲು, ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ,ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್, ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷರಾದ ಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ವೈ.ಹೆಚ್.ಹುಚ್ಚಯ್ಯ ,ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣ, ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಕೆ.ಆರ್.ಬಸವರಾಜು ಅವರುಗಳು ಭಾಗವಹಿಸಲಿದ್ದು, ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಬಿ.ಜೋತಿಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ವಿಶೇಷ ಅಹ್ವಾನಿತರಾಗಿ ತುಮಕೂರು ಜಿಲ್ಲೆಯ ಎಲ್ಲಾ ಸಂಸದರು,ಶಾಸಕರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ತುಮಕೂರು ವಿವಿ ಡಿವಿಜಿ ಕನ್ನಡ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ನಾಗಭೂಷಣ್ ಬಗ್ಗನಡು ಅವರು ವಿಶೇಷ ಉಪನ್ಯಾಸ ನೀಡುವರು.ಕಾರ್ಯಕ್ರಮದಲ್ಲಿ ಕೆ.ಎಸ್.ಆರ್.ಟಿ.ಸಿ. ಎಸ್ಸಿ, ಎಸ್ಟಿ ಅಧಿಕಾರಿಗಳು, ನೌಕರರ ಸಂಘದ ಪದಾಧಿಕಾರಿಗಳು,ನಿರ್ದೇಶಕರುಗಳು, ಸದಸ್ಯರು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷರಾದ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ವನರಂಗಪ್ಪ ತುಮಕೂರು ವಿಭಾಗದ ಕಾರ್ಯಾಧ್ಯಕ್ಷ ಜಿ.ಬಿ.ನಾಗೇಶ್ ಅವರುಗಳು ತಿಳಿಸಿದ್ದಾರೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!