ರೈತರ ಮಕ್ಕಳಿಗೆ ಗುಡ್ ನ್ಯೂಸ್: ವಿದ್ಯಾರ್ಥಿಗಳಿಗೆ 10 ಸಾವಿರ, ವಿದ್ಯಾರ್ಥಿನಿಯರಿಗೆ 11 ಸಾವಿರ ರೂ.

ಉನ್ನತ ಶಿಕ್ಷಣ ಪಡೆಯುವ ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ ಸ್ಕಾಲರ್ ಶಿಪ್ ನೀಡಲಾಗುತ್ತದೆ. ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರ್ ನಾಯಕ್ ಅವರು ಸುತ್ತೋಲೆ ಹೊರಡಿಸಿದ್ದಾರೆ. ಇದು ಹೊಸ ಶಿಷ್ಯ ವೇತನವಾಗಿದ್ದು, ಶೈಕ್ಷಣಿಕ ಸಾಲಿನಿಂದಲೇ ರೈತರ ಮಕ್ಕಳು ಉನ್ನತ ಶಿಕ್ಷಣಕ್ಕೆ ಸ್ಕಾಲರ್ ಶಿಪ್ ಪಡೆಯಬಹುದು.

ವೈದ್ಯಕೀಯ, ಇಂಜಿನಿಯರಿಂಗ್, ಬಿಟೆಕ್ ಮತ್ತು ಪಿಜಿ ವಿದ್ಯಾರ್ಥಿಗಳಿಗೆ 10,000 ರೂ. ಹಾಗೂ ವಿದ್ಯಾರ್ಥಿನಿಯರಿಗೆ 11,000 ರೂಪಾಯಿ ನೀಡಲಾಗುತ್ತದೆ.

ಎಲ್.ಎಲ್.ಬಿ., ಪ್ಯಾರಮೆಡಿಕಲ್, ಬಿ ಫಾರ್ಮ್, ನರ್ಸಿಂಗ್ ವಿದ್ಯಾರ್ಥಿಗಳಿಗೆ 7500 ರೂ., ವಿದ್ಯಾರ್ಥಿನಿಯರಿಗೆ 8000 ರೂ. ನೀಡಲಾಗುತ್ತದೆ.

ಬಿಎ, ಬಿಎಸ್ಸಿ, ಬಿಕಾಂ ವಿದ್ಯಾರ್ಥಿಗಳಿಗೆ 5000 ರೂ. ಮತ್ತು ವಿದ್ಯಾರ್ಥಿನಿಯರಿಗೆ 5500 ರೂ. ನೀಡಲಾಗುವುದು.

ರಾಜ್ಯದಲ್ಲಿ ಸುಮಾರು 18 ಲಕ್ಷ ವಿದ್ಯಾರ್ಥಿಗಳು ಯೋಜನೆಯ ಪ್ರಯೋಜನ ಪಡೆಯುವ ಸಾಧ್ಯತೆ ಇದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನವೇ ಯೋಜನೆ ಘೋಷಿಸಿದ್ದರು. ಪದವಿಪೂರ್ವ ಶಿಕ್ಷಣ ಪಡೆಯುವವರ ಮಕ್ಕಳಿಗೆ ಯೋಜನೆ ಜಾರಿಗೊಳಿಸಿದ್ದು, ಉನ್ನತ ಶಿಕ್ಷಣ ಪಡೆಯುವ ಮಕ್ಕಳಿಗೂ ಇದನ್ನು ಅನ್ವಯಿಸಲಾಗಿದೆ.

ರಾಜ್ಯದ ಯಾವುದೇ ಭಾಗದಲ್ಲಿ ಉಳುಮೆ ಭೂಮಿ ಹೊಂದಿರುವ ರೈತರ ಮಕ್ಕಳು ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ವಿವರಗಳಿಗೆ http://SSP.postmatric.karnataka.gov.in ವೆಬ್ ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!