ಡಿ.12ರಂದು ಒಕ್ಕಲಿಗರ ಸಂಘಕ್ಕೆ ಚುನಾವಣೆ

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಸಂಬಂಧಿಸಿದ ಚುನಾವಣೆಗೆ ಡಿಸೆಂಬರ್ 12ರಂದು ಮತದಾನ ನಡೆಯಲಿದೆ. ಸಂಘದ 35 ಕಾರ್ಯಕಾರಿ ಸಮಿತಿ ಸದಸ್ಯರ ಮುಂದಿನ ಐದು ವರ್ಷಗಳ ಅವಧಿಗೆ ಆಯ್ಕೆಗಾಗಿ ನಡೆಯುವ ಚುನಾವಣೆಗೆ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದಾರೆ. ರಾಜ್ಯದ 11 ಜಿಲ್ಲೆಗಳಿಂದ 35 ಸ್ಥಾನಗಳಿಗೆ ಕಾರ್ಯಕಾರಿ ಸಮಿತಿ ಸದಸ್ಯರನ್ನು ಸಂಘದ ಸದಸ್ಯರು ಆಯ್ಕೆ ಮಾಡಬೇಕಾಗಿದೆ. ನವೆಂಬರ್ 15 ರಿಂದ 23ರ ವರೆಗೂ ನಾಮಪತ್ರವನ್ನು ಆಯಾ ಜಿಲ್ಲಾ ಕ್ಷೇತ್ರದ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ನ.24ರಂದು ನಾಮಪತ್ರಗಳ ಪರಿಶೀಲನೆ ಜಿಲ್ಲಾ ಕ್ಷೇತ್ರದ ಚುನಾವಣಾ ಕಚೇರಿಗಳಲ್ಲಿ ನಡೆಯಲಿದ್ದು, ಕ್ರಮಬದ್ಧವಾದ ಉಮೇದುವಾರರ ಪಟ್ಟಿಯನ್ನು ಅಂದು ಸಂಜೆ ವೇಳೆಗೆ ಪ್ರಕಟಿಸಲಾಗುತ್ತದೆ. ನಾಮಪತ್ರಗಳನ್ನು ವಾಪಸ್ ಪಡೆಯಲು ನ.25ರ ಮಧ್ಯಾಹ್ನ 3 ಗಂಟೆವರೆಗೂ ಕಾಲಾವಕಾಶ ನೀಡಲಾಗಿದೆ. ಆ ನಂತರ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ನ.26ರಂದು ಉಮೇದುದಾರರಿಗೆ ಚಿಹ್ನೆಗಳನ್ನು ಹಂಚಿಕೆ ಮಾಡಲಾಗುತ್ತದೆ. ಡಿ.12ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಚುನಾವಣಾಧಿಕಾರಿಗಳು ನಿಗದಿಪಡಿಸುವ ಜಿಲ್ಲಾ, ತಾಲ್ಲೂಕು ಕೇಂದ್ರಗಳ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಡಿ.15ರಂದು ಬೆಳಗ್ಗೆ 9 ಗಂಟೆಯಿಂದ ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!