ರಾಜ್ಯದ 12 ಜಿಲ್ಲೆಗಳಲ್ಲಿ ‘ಗ್ರಾಮ ಒನ್’ಯೋಜನೆ ಅನುಷ್ಠಾನ

ಬೆಂಗಳೂರು: ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ವಿದ್ಯುನ್ಮಾನ ನಾಗರಿಕ ಸೇವಾ ವಿತರಣೆ ನಿರ್ದೇಶನಾಲಯದಿಂದ ಗ್ರಾಮ ಒನ್ ಯೋಜನೆಯನ್ನು ರಾಜ್ಯದ 12 ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲು ಸಿದ್ಧತೆ ಮಾಡಿಕೊಂಡಿದೆ.

ನಗರ ಪ್ರದೇಶಗಳಲ್ಲಿ ಕರ್ನಾಟಕ ಒನ್ ಮಾದರಿಯಲ್ಲಿ ನೀಡುತ್ತಿರುವ ಸೇವೆಯನ್ನು ಹಳ್ಳಿಗಳಿಗೂ ವಿಸ್ತರಿಸಲು ಗ್ರಾಮ ಒನ್ ಅನುಷ್ಠಾನಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಬಳ್ಳಾರಿ, ಕೊಪ್ಪಳ, ವಿಜಯಪುರ, ಬೆಳಗಾವಿ,ಬೀದರ್, ಬೀದರ್, ದಾವಣಗೆರೆ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ ಜಿಲ್ಲೆಗಳಲ್ಲಿ ಫ್ರಾಂಚೈಸಿ ಆಧಾರದಲ್ಲಿ ಸೇವಾ ಕೇಂದ್ರ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಈ ಕೇಂದ್ರಗಳಲ್ಲಿ ಸೇವಾಸಿಂಧು ಯೋಜನೆಯ 750ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಪಡೆಯಲು ಅರ್ಜಿ ಸ್ವೀಕರಿಸಲಿದ್ದು, ಬೆಳಗ್ಗೆ 8ರಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯ ನಿರ್ವಹಿಸಲಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!