ವಿಧಾನ ಪರಿಷತ್ ಚುನಾವಣೆ – ಜೆಡಿಎಸ್ ಪಕ್ಷದಲ್ಲಿ ಹಲವು ಆಕಾಂಕ್ಷಿಗಳ ನಡುವೆ ಅನಿಲ್ ಸ್ಪರ್ಧೆ ಬಹುತೇಕ ಖಚಿತ…!

ತುಮಕೂರು : ವಿಧಾನಪರಿಷತ್ ಚುನಾವಣೆ ನಿಗದಿಯಾದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ‌.ತುಮಕೂರು ಜಿಲ್ಲೆಯಿಂದ ಕಳೆದ ಬಾರಿ ಜೆಡಿಎಸ್ ಪಕ್ಷದಿಂದ ಚುನಾಯಿತರಾಗಿದ್ದ ಬೆಮೆಲ್ ಕಾಂತರಾಜು ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ತುರುವೇಕೆರೆ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ.ಇನ್ನೂ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡುವವರ ಪಟ್ಟಿ ದೊಡ್ಡದಿದೆ ಎಂದೇ ಹೇಳಲಾಗುತ್ತಿದೆ.ಮಾಜಿ ವಿಧಾನ ಪರಿಷತ್ ಸದಸ್ಯ ಶರವಣ,ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ ಗೌರಿಶಂಕರ್ ಸಹೋದರ ವೇಣುಗೋಪಾಲ್,ಮಾಜಿ ಶಾಸಕ ಹೆಚ್.ನಿಂಗಪ್ಪ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾಲಿಂಗಪ್ಪ,ಜಿಲ್ಲಾ ಕಾರ್ಯಾಧ್ಯಕ್ಷ ಟಿ.ಆರ್ ನಾಗರಾಜು,ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರಾಮಾಂಜನೇಯ್ಯ ಪುತ್ರ ಕೆಎಎಸ್ ಅಧಿಕಾರಿ ಅನಿಲ್ ರಾಮಾಂಜನೇಯ್ಯ ಇವರುಗಳ ಹೆಸರು ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿದೆ. ಜೆಡಿಎಸ್ ಹಾಲಿ ಇದ್ದ ಕ್ಷೇತ್ರವನ್ನು ಉಳಿಸಿಕೊಳ್ಳಲು ಅವಣಿಸುತ್ತಿದ್ದು,ಕಳೆದ ರಾತ್ರಿ ಬಿಡದಿಯ ಫಾರ್ಮ್ ಹೌಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತುಮಕೂರು ಜಿಲ್ಲೆಯ ಹಾಲಿ ಮತ್ತು ಮಾಜಿ ಶಾಸಕರು, ಜಿಲ್ಲಾ ಪದಾಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ ಎನ್ನುವ ಮಾಹಿತಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಈ ಸಭೆಯಲ್ಲಿ ಜಿಲ್ಲೆಯ ಹಲವು ವಿದ್ಯಮಾನಗಳ ಬಗ್ಗೆ ಅವಲೋಕಿಸಿ ಹಾಲಿ ಇರುವ ಸ್ಥಾನವನ್ನು ಭದ್ರ ಮಾಡಿಕೊಳ್ಳಲು ಉತ್ತಮ ಅಭ್ಯರ್ಥಿಯನ್ನು ಅಖಾಡಕ್ಕೆ ಇಳಿಸುವ ಬಗ್ಗೆ ಕಾರ್ಯತಂತ್ರ ರೂಪಿಸಿದ್ದಾರೆ ಎಂದು ತಿಳಿದುಬಂದಿದೆ.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರಾಮಾಂಜನೇಯ್ಯ ಪುತ್ರ ಅನಿಲ್ ಸ್ವರ್ಧೆ ಬಹುತೇಕ ಖಚಿತ..!

ತುಮಕೂರು ಜಿಲ್ಲೆಯಲ್ಲಿ ಶಿಕ್ಷಣಾಧಿಕಾರಿಯಾಗಿ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಾಮಾಜಿಕ ಸೇವೆಯನ್ನು ಸಲ್ಲಿಸುವ ಮೂಲಕ ಜಿಲ್ಲೆಯ ಜನರಿಗೆ ಚಿರಪರಿಚಿತರಾಗಿ ಕಳೆದ ಜಿಲ್ಲಾ ಪಂಚಾಯತ್ ಚುನಾವಣೆಗೆ ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಗೆಲವು ಸಾಧಿಸಿದರು. ಮೂರು ತಿಂಗಳ ಹಿಂದಷ್ಟೇ ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ ಗೌರಿಶಂಕರ್ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರಿ ಪ್ರತಿದಿನ ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದಾರೆ. 9ರಂದು ವಿಧಾನ ಪರಿಷತ್ ಚುನಾವಣೆ ಘೋಷಣೆ ಆದ ಬೆನ್ನಲ್ಲೇ ಸ್ಪರ್ಧೆ ಮಾಡಲು ಇಚ್ಚಿಸಿರುವ ರಾಮಾಂಜನೇಯ್ಯ ಪುತ್ರ ಅನಿಲ್ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.ಅನಿಲ್ ಅವರು ಕೆಎಎಸ್ ಅಧಿಕಾರಿಯಾಗಿದ್ದು ಜೆಡಿಎಸ್ ಪಕ್ಷದಿಂದ ಟಿಕೆಟ್ ಸಿಗುವುದು ಖಾತರಿಯಾದರೆ ವಿ ಆರ್ ಎಸ್ ಪಡೆದು ರಾಜಕೀಯ ಅಖಾಡಕ್ಕೆ ಧುಮುಕಲು ರೆಡಿಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!