ಪಾಲಿಕೆ ನೂತನ ಕಚೇರಿಯನ್ನು ತರಾತುರಿಯಲ್ಲಿ ಉದ್ಘಾಟನೆ ಮಾಡುವ ಅವಶ್ಯಕತೆ ಏನಿತ್ತು.? : ಡಾ.ರಫೀಕ್ ಅಹ್ಮದ್

ತುಮಕೂರು : ವಿಧಾನ ಪರಿಷತ್ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿ ತರಾತುರಿಯಲ್ಲಿ ಪಾಲಿಕೆಯ ನೂತನ ಕಚೇರಿ ಉದ್ಘಾಟನೆ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಅಧಿಕಾರಿಗಳ ನಡೆ ಕುತೂಹಲ ಮೂಡಿಸುವಂತಿದೆ. ಜನಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಕಚೇರಿ ಉದ್ಘಾಟನೆ ಮಾಡುವ ಮೂಲಕ ಜನಪ್ರತಿನಿಧಿಗಳ ಹಕ್ಕಿಗೆ ಚ್ಯುತಿಯುಂಟು ಮಾಡಿದ್ದಾರೆ ಎಂದು ಮಾಜಿ ಶಾಸಕರು ತಿಳಿಸಿದ್ದಾರೆ.

ಇದರ ಬೆನ್ನಲ್ಲೇ ಸಿಬ್ಬಂದಿಯೊಬ್ಬರ ಮದುವೆಗೆ ತೆರಳಲು ಕಚೇರಿಗೆ ಅನಧಿಕೃತ ರಜೆ ಘೋಷಿಸಿರುವುದು ಖಂಡನೀಯ. ಅಧಿಕಾರಿಗಳಿಗೆ ಕನಿಷ್ಟ ಪ್ರಜ್ಙೆ ಇಲ್ಲದೆ ಮನ ಬಂದಂತೆ ಕೆಲಸ ಮಾಡುತ್ತಿದ್ದಾರೆ. ಪಾಲಿಕೆ ಕಚೇರಿಯನ್ನು ಅವರ ವೈಯಕ್ತಿಕ ಕಚೇರಿಯನ್ನಾಗಿ ಮಾಡಿಕೊಂಡಿದ್ದಾರೆ. ಇಂತಹ ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಸಮರ್ಪಕವಾಗಿ ಮಾಡಿಸಿಕೊಡುತ್ತಾರೆಯೇ ಎಂಬ ನಿರೀಕ್ಷೆ ಹುಸಿಯಾಗಿದೆ. ಜನಪ್ರತಿನಿಧಿಗಳು ಸಹ ಇದರ ಬಗ್ಗೆ ಗಮನ ಹರಿಸಿ ಸಿಬ್ಬಂದಿಗಳ ಈ ನಡೆಯನ್ನು ಖಂಡಿಸಿ ಮುಂದೆ ಇಂತಹ ಘಟನೆಗಳು ನಡೆಯಂತೆ ಎಚ್ಚರ ವಹಿಸಬೇಕಾಗಿದೆ ಎಂದು ಡಾ.ರಫೀಕ್ ಅಹ್ಮದ್ ಸಲಹೆ ನೀಡಿದ್ದಾರೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!