ರಾಜ್ಯದಲ್ಲಿ ಇನ್ನೂ 3 ದಿನ ಬಾರಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ

ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಶಿವಮೊಗ್ಗ, ಬೆಂಗಳೂರು, ತುಮಕೂರು, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗಲಿದ್ದು, ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ವಾತಾವರಣ ಹೇಗಿರಲಿದೆ? ಮುಂದಿನ 24 ಗಂಟೆ ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಕಡೆ, ಕರಾವಳಿ ಪ್ರದೇಶಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಮಳೆ ಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂ ಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಈ ಹಿನ್ನೆಲೆ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಕೆಆರ್ ಎಸ್ ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯ ಸೂಚನೆ ನೀಡಿತ್ತು.

You May Also Like

error: Content is protected !!