ಪಾವಗಡ:ತಾಲೂಕಿನ ನಿಡಗಲ್ಲು ಹೋಬಳಿಯ ಅರಸೀಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಸೇರಿದಂತೆ ಮಂಗಳವಾಡ, ಸಿ. ಕೆ ಪುರ, ಕೆ. ಟಿ ಹಳ್ಳಿ ಗ್ರಾ. ಪಂ ವ್ಯಾಪ್ತಿಯ ಹಲವು ಗ್ರಾಮಗಳಿಂದ ಪ್ರತಿನಿತ್ಯ ಪಾವಗಡ ಪಟ್ಟಣದ ಶಾಲಾ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳ ಸಮಯಕ್ಕೆ ಅನುಗುಣವಾಗಿ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ಸೋಮವಾರ ಸಂಜೆ ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಈ ವೇಳೆ 10ನೇ ತರಗತಿ ವಿದ್ಯಾರ್ಥಿ ಕೀರ್ತನ ಮಾತನಾಡಿ ನಾವು ಪ್ರತಿನಿತ್ಯ ಅರಸೀಕೆರೆ ಗ್ರಾಮದಿಂದ ಪಾವುಗಡ ಪಟ್ಟಣಕ್ಕೆ ಶಾಲೆಗೆ ಬರುತ್ತೇವೆ ಬಸ್ ಸೌಕರ್ಯ ಇಲ್ಲದ ಕಾರಣ ನಮ್ಮ ಊರಿನಲ್ಲಿ 7 ಗಂಟೆಗೆ ಲಭ್ಯವಿರುವ ಬಸ್ಸಿನಲ್ಲಿ ಪ್ರಯಾಣಿಸಿ ಬರುತ್ತೇವೆ ಆದರೆ ಶಾಲೆ 10 ಗಂಟೆಗೆ ಪ್ರಾರಂಭವಾಗುತ್ತದೆ ಮತ್ತು ಸಂಜೆ 4 ಗಂಟೆಗೆ ಮುಕ್ತಾಯವಾಗುತ್ತದೆ ಆದರೆ ಸಂಜೆ 7 ಗಂಟೆಯಾದರೂ ನಮಗೆ ಬಸ್ ಬರುವುದಿಲ್ಲ ಆದ್ದರಿಂದ ನಮಗೆ ಸಮಸ್ಯೆಯಾಗಿದೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದರು ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ನೂರಾರು ವಿದ್ಯಾರ್ಥಿನಿಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.