ನವೆಂಬರ್ 20ರವರೆಗೆ ಈ ಜಿಲ್ಲೆಗಳಲ್ಲಿ ಅಧಿಕ ಮಳೆ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ನವೆಂಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಈಶಾನ್ಯ ಮುಂಗಾರು ಮಳೆ ಕಳೆದ ಎರಡು ವಾರಗಳಲ್ಲಿ ವಾಡಿಕೆಗಿಂತ ಶೇ.100ರಷ್ಟು ಹೆಚ್ಚು ಬಿದ್ದಿದೆ. ನ.1ರಿಂದ ನಿನ್ನೆಯವರೆಗೆ ರಾಜ್ಯದ ವಾಡಿಕೆ ಮಳೆ ಪ್ರಮಾಣ 24.6 ಮಿ.ಮೀ. ಆಗಿದ್ದು , 49.3 ಮಿ.ಮೀ.ನಷ್ಟು ಮಳೆಯಾಗಿದೆ. ಇದು ವಾಡಿಕೆಗಿಂತ ಶೇ.100ರಷ್ಟು ಹೆಚ್ಚಾದಂತಾಗಿದೆ. ಆದರೆ, ಉತ್ತರ ಒಳನಾಡಿನಲ್ಲಿ ಮಳೆ ಕೊರತೆ ಕಂಡು ಬಂದಿದ್ದು, ವಾಡಿಕೆಗಿಂತ ಶೇ.30ರಷ್ಟು ಕಡಿಮೆ ಮಳೆಯಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ನೈರುತ್ಯ ಮುಂಗಾರು ಅವಯಲ್ಲಿ ವಾಡಿಕೆಗಿಂತ ಶೇ.35ರಷ್ಟು ಹೆಚ್ಚು ಮಳೆಯಾಗಿತ್ತು. ಈ ಅವಯಲ್ಲಿ ದಕ್ಷಿಣ ಒಳನಾಡಿನಲ್ಲಿ ಶೇ.87, ಮಲೆನಾಡಿನಲ್ಲಿ ಶೇ.62, ಕರಾವಳಿ ಭಾಗದಲ್ಲಿ ಶೇ.57ರಷ್ಟು ವಾಡಿಕೆಗಿಂತ ಅಕ ಮಳೆಯಾಗಿವೆ. ಆದರೆ, ಈ ಅವಯಲ್ಲೂ ಉತ್ತರ ಒಳನಾಡಿನಲ್ಲಿ ಶೇ.26ರಷ್ಟು ಮಳೆ ಕೊರತೆ ಕಂಡುಬಂದಿದೆ.

ಕಳೆದ 2 ವಾರಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಶೇ.147ರಷ್ಟು, ಮಲೆನಾಡಿನಲ್ಲಿ 157 ಹಾಗೂ ಕರಾವಳಿಯಲ್ಲಿ 191ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!