ರಾಜ್ಯ ಕಾಂಗ್ರೆಸ್ ಸೇರಲು ಮಾಜಿ ಸಚಿವ ತಯಾರಿ

ಬೆಂಗಳೂರು :ಕಾಂಗ್ರೆಸ್ ತೊರೆದು ಹೋಗಿದ್ದ ಹಾಸನ ಜಿಲ್ಲೆ ಅರಕಲಗೂಡು ಕ್ಷೇತ್ರದ ಮಾಜಿ ಸಚಿವ ಎ.ಮಂಜು ಮರಳಿ ಕಾಂಗ್ರೆಸ್ ಸೇರುವ ತಯಾರಿ ನಡೆಸಿದ್ದು, ತಡರಾತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಪಶುಸಂಗೋಪಲನೆ ಸಚಿವರಾಗಿದ್ದ ಎ.ಮಂಜು ಇದ್ದಕ್ಕಿದ್ದಂತೆ ಪಕ್ಷ ತೊರೆದು ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸೇರಿ ಜೆಡಿಎಸ್‍ನ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದರು.

ಅನಂತರ ಕಾಂಗ್ರೆಸ್ ವಿರುದ್ಧ ವ್ಯಾಪಕ ಟೀಕೆಗಳನ್ನು ಮಾಡಿದ್ದರು. ಹಾಸನ ಜಿಲ್ಲಾ ರಾಜಕಾರಣದಲ್ಲಿ ಶಾಸಕ ಪ್ರೀತಮ್‍ಗೌಡ ಅವರ ಜತೆ ಮನಸ್ಥಾಪ ಹೊಂದಿದ್ದಾರೆ ಎಂದು ಹೇಳಲಾಗಿದ್ದು, ಈ ಕಾರಣಕ್ಕೆ ಮರಳಿ ಕಾಂಗ್ರೆಸ್ ಸೇರ್ಪಡೆಯಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಮೊನ್ನೆ ರಾತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ. ಆದರೆ, ಕಾಂಗ್ರೆಸ್‍ನಿಂದ ಈವರೆಗೂ ಮಂಜು ಅವರಿಗೆ ಸ್ಪಷ್ಟ ಭರವಸೆ ಸಿಕ್ಕಿಲ್ಲ. ಮೊದಲು ಅರ್ಜಿ ಹಾಕಿ ಅಲ್ಲಂ ವೀರಭದ್ರಪ್ಪ ಅವರ ಸಮಿತಿ ಜಿಲ್ಲಾ ನಾಯಕರ ಜತೆ ಚರ್ಚಿಸಿ ವರದಿ ನೀಡಲಿದೆ. ಬಳಿಕ ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿರುವುದಾಗಿ ತಿಳಿದು ಬಂದಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!