ಡಿಸೆಂಬರ್ 30ರೊಳಗೆ ಸ್ಥಳೀಯ ಸಂಸ್ಥೆ ಚುನಾವಣೆ ಪೂರ್ಣಗೊಳಿಸಲು‌ ಹೈಕೋರ್ಟ್ ಆದೇಶ

ಬೆಂಗಳೂರು: ಡಿಸೆಂಬರ್ 30 ರೊಳಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಅಲ್ಲದೆ, ನವೆಂಬರ್ 26 ರೊಳಗೆ ಮೀಸಲಾತಿ ಪಟ್ಟಿ ಒದಗಿಸಲು ಹೈಕೋರ್ಟ್ ಆದೇಶಿಸಿದೆ.

ನಗರ ಸ್ಥಳಿಯ ಸಂಸ್ಥೆಗಳ ಚುನಾವಣೆ ವಿಳಂಬ ಹಿನ್ನಲೆ ಇಂದು ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ನಡೆಸಿತು

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಹೈಕೋರ್ಟ್ ಗೆ ಹಾಜರಾಗಿದ್ದರು. ನ.26 ರೊಳಗೆ ಮೀಸಲಾತಿ ಅಧಿಸೂಚನೆ ಹೊರಡಿಸುತ್ತೇವೆ ಎಂದು ರಾಜ್ಯ ಸರ್ಕಾರದ ಪರವಾಗಿ ಹೈಕೋರ್ಟ್ ಗೆ ಮಾಹಿತಿ ನೀಡಿದರು.

ಇನ್ನು ನವೆಂಬರ್ 26ರೊಳಗೆ ಮೀಸಲಾತಿ ಅಧಿಸೂಚನೆ ಹೊರಡಿಸಿದರೆ ಡಿಸೆಂಬರ್ ಅಂತ್ಯದೊಳಗೆ ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗದ ಪರ ವಕೀಲರು ಕೋರ್ಟ್ ಗೆ ತಿಳಿಸಿದರು.

ನ್ಯಾಯಾಲಯ ಈ ಹೇಳಿಕೆಗಳನ್ನು ದಾಖಲಿಸಿಕೊಂಡು ಡಿಸೆಂಬರ್ 30ರೊಳಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ನಿರ್ದೇಶನ ನೀಡಿದೆ.

You May Also Like

error: Content is protected !!