ತುಮಕೂರು ಜಿಲ್ಲಾದ್ಯಂತ ಎರಡು ದಿನ ಶಾಲೆಗಳಿಗೆ ರಜೆ

ತುಮಕೂರು: ಆಯುಕ್ತ ವಿಶಾಲ್ ಆರ್‌ ಅವರು ಹೊರಡಿಸಿರುವ ಆದೇಶದಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬಂದು ಹೋಗುವುದಕ್ಕೆ ತೊಂದ್ರೆಯಾಗುತ್ತಿದೆ.

ಹೀಗಾಗಿ ವಿದ್ಯಾರ್ಥಿಗಳಿಗೆ ತೊಂದ್ರೆಯಾಗದಂತೆ,. ಆಯಾ ಜಿಲ್ಲೆಗಳ ಪರಿಸ್ಥಿತಿಯುನ್ನು ನೋಡಿಕೊಂಡು, ರಜೆ ನೀಡಬೇಕು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಬರದಿರುವ ಪತ್ರದಲ್ಲಿ ಹೇಳಿದ್ದಾರೆ. ಇದೇ ವೇಳೆ ಅವರು ಒಂದು ವೇಳೆ ರಜೆ ನೀಡಿದ್ರೆ, ಮುಂದಿನ ದಿನದಲ್ಲಿ ತರಗತಿಯನ್ನು ಸರಿದೂಗಿಸಬೇಕು ಅಂತ ಕೂಡ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಅಕಾಲಿಕ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ

ದಿನಾಂಕ:19.11.2021 ಮತ್ತು 20.11.2021 ರಂದು ತುಮಕೂರು ಜಿಲ್ಲೆಯಾದ್ಯಂತ

ಎಲ್ಲ ಅಂಗನವಾಡಿ/ ಶಿಶುವಿಹಾರ ಹಾಗೂ ಸರ್ಕಾರಿ/ಅನುದಾನಿತ/ಅನುದಾನರಹಿತ ಕಿರಿಯ/ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ
ವೈ ಎಸ್ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.

ರಜೆಯನ್ನು ಘೋಷಣೆ ಮಾಡಲಾದ ದಿನಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ
ಸರಿದೂಗಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!