ಬಾರಿ ಮಳೆ, ತಿರುಮಲ ಬಾಲಾಜಿ ದೇವಸ್ಥಾನದ ರಸ್ತೆ ಬಂದ್

ತಿರುಮಲ: ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿ ಸಮೀಪದ ತಿರುಮಲದಲ್ಲಿರುವ ಪುರಾತನ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಗುರುವಾರ ಸಂಜೆಯಿಂದ ಅನಿರ್ದಿಷ್ಟಾವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಎಂದು ದೇವಸ್ಥಾನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಟ್ಟ-ದೇವಾಲಯಕ್ಕೆ ಹೋಗುವ ಮೆಟ್ಟಿಲನ್ನು ಸಹ ಮುಚ್ಚಲಾಗಿದೆ ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ. ಜತೆಗೆ ವಿಮಾನ ಸಂಚಾರಕ್ಕೂ ತೊಂದರೆಯಾಗಿದೆ.

ಹೈದರಾಬಾದ್ ಮತ್ತು ಬೆಂಗಳೂರಿನಿಂದ ರೇಣಿಗುಂಟಾ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ಎರಡು ಪ್ರಯಾಣಿಕರ ವಿಮಾನಗಳು ಇಂದು ಪ್ರತಿಕೂಲ ಹವಾಮಾನದಿಂದಾಗಿ ಹಿಂತಿರುಗಬೇಕಾಯಿ ಎಂದು ತಿರುಪತಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್ ಸುರೇಶ್ ಪಿಟಿಐಗೆ ತಿಳಿಸಿದ್ದಾರೆ,

ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ನವದೆಹಲಿಯಿಂದ ತಿರುಪತಿಗೆ ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಅವರು ಹೇಳಿದರು.

You May Also Like

error: Content is protected !!