ಮಾವಿನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹನುಮಂತರಾಜು ಆಯ್ಕೆ.

ಗುಬ್ಬಿ: ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಮಾವಿನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹನುಮಂತರಾಜು ಆಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಹನುಮಂತರಾಜು ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಜಗದೀಶ್ ಅವರು ಕಣದಲ್ಲಿದ್ದರು. ಮತ ಚಲಾವಣೆಯ ಪ್ರಕ್ರಿಯೆಯಲ್ಲಿ ಹನುಮಂತರಾಜು ಅವರಿಗೆ 9 ಮತಗಳು ಚಲಾವಣೆಗೊಂಡು ಜಯಶಾಲಿಯಾದರು. ಪ್ರತಿಸ್ಪರ್ಧಿಯಾದ ಜಗದೀಶ್ ಅವರು 4 ಮತಗಳು ಗಳಿಸಿ ಪರಾಜಯಗೊಂಡರು.

ಈ ಸಂದರ್ಭದಲ್ಲಿ ವಿ ಎಸ್ ಎಸ್ ಎನ್ ಅಧ್ಯಕ್ಷ ಸಿಎನ್ ಕೆ ಮಹೇಶ್, ನಿರ್ದೇಶಕ ಶಂಕರ್, ಸೋಮಶೇಖರ್, ಪಿಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್.ಶಿವಲಿಂಗಯ್ಯ, ತಾಪಂ ಮಾಜಿ ಸದಸ್ಯ ಭಾನುಪ್ರಕಾಶ್ ಇತರರು ನೂತನ ಅಧ್ಯಕ್ಷರಿಗೆ ಅಭಿನಂದಿಸಿದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!