ಕಲ್ಲೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಕೆ.ಎಂ.ಸುಮಿತ್ರಾ ಅವಿರೋಧ ಆಯ್ಕೆ.

ಗುಬ್ಬಿ: ತಾಲ್ಲೂಕಿನ ಕಲ್ಲೂರು ಗ್ರಾಪಂ ಅಧ್ಯಕ್ಷ ಗಾದಿಗೆ ನಡೆದ ಚುನಾವಣೆಯಲ್ಲಿ ಕೆ.ಎಂ.ಸುಮಿತ್ರಾ ಅವಿರೋಧ ಆಯ್ಕೆಯಾದರು.

ಗ್ರಾಮ ಪಂಚಾಯತಿ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಕೆ.ಎಂ.ಸುಮಿತ್ರಾ ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಹಿನ್ನಲೆ ಅವಿರೋಧ ಘೋಷಣೆ ಮಾಡಲಾಯಿತು. ಈ ಹಿಂದೆ ಅಧ್ಯಕ್ಷರಾಗಿದ್ದ ರವಿಕುಮಾರ್ ರಾಜೀನಾಮೆ ಸಲ್ಲಿಸಿ ತೆರವಾಗಿದ್ದ ಎಸ್.ಸಿ ಮೀಸಲು ಸ್ಥಾನಕ್ಕೆ ನಡೆದ ಚುನಾವಣೆ ಎಲ್ಲಾ ಸದಸ್ಯರ ಒಮ್ಮತದಲ್ಲಿ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಯಿತು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಸುಮಿತ್ರಾ ಮಾತನಾಡಿ ಕಲ್ಲೂರು ಗ್ರಾಪಂ ಅಭಿವೃದ್ಧಿಗೆ ಎಲ್ಲಾ ಸದಸ್ಯರ ಸಮ್ಮತಿ ಪಡೆದು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ರಸ್ತೆ, ಕುಡಿಯುವ ನೀರು, ಬೀದಿ ದೀಪ ಅಚ್ಚುಕಟ್ಟಾಗಿ ನಿರ್ವಹಿಸಲು ಬದ್ಧನಾಗಿದ್ದೇನೆ. ಕಸ ವಿಲೇವಾರಿ ಹಾಗೂ ಸ್ವಚ್ಚತೆಗೆ ಆದ್ಯತೆ ನೀಡಿ ಕೆಲಸ ಮಾಡಲಾಗುವುದು. ತುರುವೇಕೆರೆ ಶಾಸಕ ಮಸಾಲಾ ಜಯರಾಮ್ ಅವರ ಮಾರ್ಗದರ್ಶನದಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಕೆ.ಸಿ.ಗಿರೀಶ್, ರಾಜೇಗೌಡ, ಬೆಟ್ಟಯ್ಯ, ಮೊಹಮ್ಮದ್ ಯೂಸುಫ್, ಮೋಹನ್, ಭಾಗ್ಯಮ್ಮ, ಪಿಡಿಒ ಗಂಗಮಹದೇವಯ್ಯ ಹಾಗೂ ಎಲ್ಲಾ ಗ್ರಾಪಂ ಸದಸ್ಯರು ಇದ್ದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!