ಹೊಸಕೆರೆ ಗ್ರಾಪಂ ಅಧ್ಯಕ್ಷರಾಗಿ ಮಂಜುಳ ಉಪಾಧ್ಯಕ್ಷರಾಗಿ ದಯಾನಂದ್ ಅವಿರೋಧ ಆಯ್ಕೆ

ಹಾಗಲವಾಡಿ : ಹೋಬಳಿ ಹೊಸಕೆರೆ ಗ್ರಾಪಂ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಂಜುಳ ಉಪಾಧ್ಯಕ್ಷರಾಗಿ ಶಾಸಕ ಶ್ರೀನಿವಾಸ್ ಬೆಂಬಲಿತ ಅಭ್ಯರ್ಥಿ ದಯಾನಂದ್ ಅವಿರೋಧವಾಗಿ ಆಯ್ಕೆಯಾದರು.
ಹೊಸಕೆರೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಉಪ ತಹಶೀಲ್ದಾರ್ ಶ್ರೀನಿವಾಸ್ ಪ್ರಕ್ರಿಯೆ ನಡೆಸಿಕೊಟ್ಟರು.ಈ ಹಿಂದೆ ಮಂಗಳ ಗೌರಮ್ಮ ಹಾಗೂ ಉಪಾಧ್ಯಕ್ಷೆ ಮಂಜುಳ ರಾಜಿನಾಮೇ ಸಲ್ಲಿಸಿ ತೆರೆವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆ ಸ್ಥಾನಕ್ಕೆ ಮಂಜುಳ ಉಪಾಧ್ಯಕ್ಷ ಸ್ಥಾನಕ್ಕೆ ದಯಾನಂದ್ ನಾಮಪತ್ರ ಸಲ್ಲಿಸಿದರು. ಒಟ್ಟು 19 ಮಂದಿ ಸದಸ್ಯರ ಹಾಜರಾತಿಯಲ್ಲಿ ಏಕೈಕ ನಾಮಪತ್ರ ಸಲ್ಲಿಕೆ ಹಿನ್ನಲೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆಅವಿರೋಧವಾಗಿ ಆಯ್ಕೆಯಾದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಗ್ರಾಮ‌ ಪಂಚಾಯಿತಿ ಅಧ್ಯಕ್ಷೆ ಮಂಜುಳ ಮಾತನಾಡಿ ತಾಲ್ಲೂಕಿನ ಪ್ರಮುಖ ಕೇಂದ್ರ ಹೊಸಕೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸರ್ವ ಸದಸ್ಯರ ಸಹಕಾರ ಪಡೆಯಲಾಗುವುದು. ಜತೆಗೆ ಚುನಾಯಿತ ಜನಪ್ರತಿನಿಧಿಗಳ ಮೂಲಕ ಸರ್ಕಾರದಿಂದ ವಿಶೇಷ ಅನುದಾನ ತಂದು ಎಲ್ಲಾ ಮೂಲ ಸವಲತ್ತು ಒದಗಿಸಲು ಬದ್ಧನಾಗಿರುತ್ತೇನೆ. ಜಿಲ್ಲೆಯಲ್ಲೇ ಮಾದರಿ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಪಡೆಯಲು ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಗೆ ವಸತಿ ಯೋಜನೆ, ಕುಡಿಯುವ ನೀರು, ಬೀದಿ ದೀಪ, ರಸ್ತೆ ಹೀಗೆ ಅನೇಕ ಸೌಲಭ್ಯ ಒದಗಿಸಿ ಪಂಚಾಯಿತಿ ಆದಾಯ ಮೂಲ ವೃದ್ಧಿಗೊಳ್ಳಿಸುವುದಾಗಿ ತಿಳಿಸಿದರು.

ಸರ್ಕಾರದಿಂದ ಬರುವ ಎಲ್ಲಾ ಅನುದಾನವನ್ನು ಸದ್ಬಳಕೆ ಮಾಡಿ ಗುಡಿಸಲು ಮುಕ್ತ ಗ್ರಾಮಗಳ ರಚನೆಗೆ ವಸತಿ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಮೇಲೆ ಒತ್ತಡ ತರುವ ಕೆಲಸ ಮಾಡುತ್ತೇವೆ. ಜೊತೆಗೆ ಕುಡಿಯುವ ನೀರು ಸೌಲಭ್ಯ, ಸ್ವಚ್ಛತೆಗೆ ಆದ್ಯತೆ ಹಾಗೂ ಇಲ್ಲಿನ ಕೃಷಿಕ ವರ್ಗಕ್ಕೆ ಅನುಕೂಲ ಮಾಡುವ ನೀರಾವರಿ ಯೋಜನೆ ಸಾಕಾರಗೊಳಿಸಲಾಗುವುದು. ಯಾವುದೇ ಗೊಂದಲಕ್ಕೆ ಆಸ್ಪದ ನೀಡದೆ ಅಭಿವೃದ್ಧಿಗೆ ಮಾನ್ಯತೆ ನೀಡಿ ಪಕ್ಷಾತೀತ ನಿಲುವು ತಾಳುವುದಾಗಿ ತಿಳಿಸಿದರು.

ಉಪಾಧ್ಯಕ್ಷ ದಯಾನಂದ್ ಮಾತನಾಡಿ ಶಾಸಕ ಎಸ್ ಆರ್ ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ ಅವರ ಸಹಕಾರ ಪಡೆದು ಹೊಸಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಹೆಚ್ಚು ಅನುದಾನವನ್ನು ತಂದು ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ನಮ್ಮ ಎಲ್ಲ ಸದಸ್ಯರ ಸಹಕಾರ ಅತ್ಯಗತ್ಯ ಹೊಸಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೆನ್ನೆಗುದ್ದಿಗೆ ಬಿದ್ದಿರುವ ಕಾಮಾಗಾರಿಗಳನ್ನು ಅದಷ್ವು ಬೇಗ ಮಾಡಲಾಗುತ್ತದೆ. ಯಾವುದೇ ಜಾತಿ ಮತ ಭೇದವನ್ನು ಬಿಟ್ಟು ಎಲ್ಲರೂ ಒಗ್ಗಾಟಾಗಿ ಕೆಲಸ ಮಾಡೋಣ ನಮ್ಮ ಅವಧಿಯಲ್ಲಿ ಹೊಸಕೆರೆ ಪಂಚಾಯಿತಿಯನ್ನು ಅಭಿವೃದ್ಧಿಯತ್ತ ಕೊಡೊಯಲ್ಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಬಡವರಿಗೆ ವಸತಿ ಯೋಜನೆ , ಶೆಡ್ಡ್ ,ಹಿಂಗೂ ಗುಂಡಿಗಳನ್ನು ರೈತರಿಗೆ ತಲುಪಿಸುವ ಜವಬ್ದಾರಿಯನ್ನು ಮಾಡಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಇದೇ ಸಂಧರ್ಭದಲ್ಲಿ ಕಂದಾಯಧಿಕಾರಿ ಗುರು ಪ್ರಸಾದ್. ಗ್ರಾಮ ಪಂಚಾಯಿತಿ ಸದಸ್ಯರಾದ ಅಜಯ್ . ಗೀತಾಎಕೆಪಿರಾಜು. ದಕ್ಷಿಣಾಮೂರ್ತಿ. ಮಹಾರುದ್ರಸ್ವಾಮಿ. ನರಸಿಂಹಮೂರ್ತಿ. ನಂದಿನಿ. ಮಂಗಳಗೌರಮ್ಮ .ಮಾಜಿ ಗ್ರಾಮ ಪಂಚಾಯಿತಿ ಮುಖಂಡರಾದ ಗುರುರೇಣುಕರಾಧ್ಯ. ಡಾಬಾರಾಜು. ಮಲ್ಲೇಶ್ , ಹೆಚ್ ಆರ್ ಪಿ ಆರಾಧ್ಯ. ಸೇರಿದಂತೆ ಗ್ರಾಪಂ ಸದಸ್ಯರು ಇತರರು ಇದ್ದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!