ಪಾವಗಡ: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ 1750 ಅಡಿಗಳ ತ್ರಿವರ್ಣ ಧ್ವಜದ ಮೆರವಣಿಗೆ

ಪಾವಗಡ ಪಟ್ಟಣದಲ್ಲಿ ಇಂದು ಹೆಲ್ಪ್ ಸೊಸೈಟಿ ಮತ್ತು ವಿವೇಕಾನಂದ ವಿದ್ಯಾ ಸಂಸ್ಥೆ ಹಾಗೂ ಪಾವಗಡ ತಾಲೂಕಿನ ಶಾಲಾ ವಿದ್ಯಾರ್ಥಿಗಳು ನಾಗರಿಕರು ದೇಶಪ್ರೇಮಿಗಳೊಂದಿಗೆ ಪಾವಗಡ ಪಟ್ಟಣದ ಪ್ರಮುಖ ಬೀದಿಗಳಲ್ಲಿ 1750 ಅಡಿಗಳ ಉದ್ದದ ಮಹಾ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಲಾಯಿತು.
ಮೆರವಣಿಗೆಯಲ್ಲಿ ಪಟ್ಟಣದ ವಿವಿಧ ಶಾಲಾ ಕಾಲೇಜುಗಳ 2000ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಮುಖಂಡರುಗಳಾದ ಡಾಕ್ಟರ್ ಜಿ ವೆಂಕಟರಾಮಯ್ಯ, ಮಾನಂ ವೆಂಕಟಸ್ವಾಮಿ, ಮಾಜಿ ಶಾಸಕ ತಿಮ್ಮರಾಯಪ್ಪ, ಸೊಗಡು ವೆಂಕಟೇಶ್, ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್, ಸಿ ಪಿ ಐ ಶ್ರೀಕಾಂತ್ ರೆಡ್ಡಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಟ್ಟ ನರಸಿಂಹ, ಮುಂತಾದವರು ಉಪಸ್ಥಿತರಿದ್ದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!