ಗುಬ್ಬಿ: ಸಮಗ್ರ ಪ್ರಶಸ್ತಿ ಗಳಿಸಿದ ವಿದ್ಯಾರ್ಥಿನಿಯರಿಗೆ ಅಭಿನಂದನೆ

ಗುಬ್ಬಿ: ಕಸಬ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಶಾಲಾ ಅಭಿವೃದ್ದಿ ಸಮಿತಿ ವತಿಯಿಂದ ಪ್ರೋತ್ಸಾಹದ ಸನ್ಮಾನ ಮಾಡಿ ಗೌರವಿಸಲಾಯಿತು.

ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಎಸ್ ಡಿಎಂಸಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸಾಮೂಹಿಕ ಮತ್ತು ವೈಯಕ್ತಿಕ ಬಹುಮಾನ ಗಳಿಸಿದ ಎಲ್ಲಾ ಬಾಲಕಿಯರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಡಿಎಂಸಿ ಅಧ್ಯಕ್ಷ ಪ್ರಸಾದ್ ಮಾತನಾಡಿ, ಹೆಣ್ಣು ಮಕ್ಕಳ ಶಾಲೆಯಲ್ಲಿ ಕ್ರೀಡಾಪಟುಗಳ ಅನಾವರಣಗೊಳಿಸಲು ಶಿಕ್ಷಕರ ಪಟ್ಟ ಶ್ರಮ ಫಲ ನೀಡಿದೆ. ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಕಬ್ಬಡಿ, ಖೋಖೋ, ರಿಲೆ ಮತ್ತು ಥ್ರೋ ಬಾಲ್ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಜೊತೆಗೆ ವೈಯಕ್ತಿಕ ಆಟದಲ್ಲಿ 100 ಮೀಟರ್, 200 ಮೀಟರ್ ಓಟ ಹಾಗೂ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉತ್ತಮ ಪ್ರತಿಭೆಯ ಹೆಣ್ಣು ಮಕ್ಕಳ ಆಸಕ್ತಿಗೆ ಅನುಗುಣವಾಗಿ ಸೂಕ್ತ ತರಬೇತಿ ನೀಡಲು ಅಭಿವೃದ್ದಿ ಸಮಿತಿ ಸಹಕಾರ ನೀಡಲಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ವಸಂತಕುಮಾರಿ, ಶಿಕ್ಷಕರಾದ ಭದ್ರೆಗೌಡ, ಫರ್ವಿಜಾ ಬಾನು, ಪೂರ್ಣಿಮಾ, ನಾಗಮಣಿ, ಪವಿತ್ರ, ಕೋಮಲಕುಮಾರಿ, ಗಂಗಮ್ಮ ಇತರರು ಇದ್ದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!