ಬಿಪಿಎಲ್ ಕಾರ್ಡ್ ಹೊಂದಿದ ಕಾರ್ ಮಾಲೀಕರಿಗೆ ಗುಡ್ ನ್ಯೂಸ್: ಕಾರ್ ಇದ್ರೆ ರದ್ದು ಮಾಡಲ್ಲ ರೇಷನ್ ಕಾರ್ಡ್

ಕಾರ್ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆ ಆನಂದಪುರ ಮುರುಘಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇನ್ನು ಮುಂದೆ ಕಾರ್ ಇರುವವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಹೇಳಿದರು.

ಪ್ರಸ್ತುತ 1 ಲಕ್ಷ ರೂಪಾಯಿಗೂ ಹಳೆ ಕಾರ್ ಗಳು ಸಿಗುತ್ತಿವೆ. ಬಿಪಿಎಲ್ ಕಾರ್ಡ್ ಹೊಂದಿದ ಅನೇಕರು ಕಾರ್ ತೆಗೆದುಕೊಳ್ಳುತ್ತಾರೆ. ಕೆಲಸಕ್ಕೆ ತೆಗೆದುಕೊಂಡು ಹೋಗುತ್ತಾರೆ. ಅಂತವರ ಕಾರ್ಡ್ ಸಹಿತ ಹಲವರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ. ಇದು ಸರಿಯಲ್ಲ. ಹೀಗಾಗಿ, ಮುಖ್ಯಮಂತ್ರಿ ಅವರೊಂದಿಗೆ ನಾನು ಮತ್ತು ಶಾಸಕ ಹರತಾಳು ಹಾಲಪ್ಪ ಚರ್ಚೆ ನಡೆಸಿದ್ದೇವೆ. ಈ ರೀತಿ ನಿಯಮದಿಂದ ಬಡವರ ಕಾರ್ಡ್ ಗಳು ರದ್ದಾಗುತ್ತವೆ. ಜೀವನಕ್ಕೆ ತೊಂದರೆಯಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟಿದ್ದು, ಬಡವರ ಬಗ್ಗೆ ಕಾಳಜಿ ಹೊಂದಿದ ಮುಖ್ಯಮಂತ್ರಿಗಳು ಕಾರ್ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಆದೇಶ ಹೊರಡಿಸುತ್ತಾರೆ ಎಂದು ತಿಳಿಸಿದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!