e-KYC ಮಾಡಿಸಲು ಸೆ.7 ಕಡೆಯ ದಿನ

ತುಮಕೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರೈತರು ವಾರ್ಷಿಕ 6೦೦೦ ರೂ.ಗಳ ಆರ್ಥಿಕ ನೆರವನ್ನು ಪಡೆಯಲು ಸೆಪ್ಟೆಂಬರ್ 7ರೊಳಗಾಗಿ ಕಡ್ಡಾಯವಾಗಿ e-KYC ಮಾಡಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮನವಿ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಆರ್ಥಿಕ ನೆರೆವು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಆಗಬೇಕಾದರೆ e-KYC ಮಾಡಿಸುವುದು ಕಡ್ಡಾಯವಾಗಿರುತ್ತದೆ. ತಪ್ಪಿದಲ್ಲಿ ಕೇಂದ್ರ ಸರ್ಕಾರದಿಂದ ದೊರೆಯುವ ಆರ್ಥಿಕ ನೆರವು ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗುವುದಿಲ್ಲ.

ಜಿಲ್ಲೆಯಲ್ಲಿ ಇನ್ನೂ 133355 ರೈತರುe-KYC ಮಾಡಿಸಲು ಬಾಕಿ ಇರುತ್ತಾರೆ. e-KYC ಮಾಡಿಸಲು ಸೆಪ್ಟೆಂಬರ್ 7 ಕಡೆಯ ದಿನವಾಗಿರುವುದರಿಂದ ಪಿಎಮ್ ಕಿಸಾನ್ ಯೋಜನೆಯಡಿ ನೋಂದಾಯಿಸಿ e-KYC ಮಾಡಿಸದೇ ಇರುವ ಜಿಲ್ಲೆಯ ಎಲ್ಲಾ ರೈತರು ಸೆಪ್ಟೆಂಬರ್e-KYC ಮಾಡಿಸಲು ಓಟಿಪಿ ಆಧಾರಿತ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಆಧಾರ್‌ಗೆ ನೋಂದಾಯಿಸಿದ ಮೊಬೈಲ್ ಸಂಖ್ಯೆಯೊಂದಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಆಧಾರಿತ e-KYC ಮಾಡಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!