ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿ ಕಡೆ ಮುಖ ಮಾಡಿದ ಎಸ್.ಪಿ.ಮುದ್ದಹನುಮೇಗೌಡ, ಎಂ.ಡಿ.ಲಕ್ಷ್ಮೀನಾರಾಯಣ

ತುಮಕೂರು: ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ನಿಂದ ಕಣಕ್ಕೆ ಇಳಿಯುವುದಾಗಿ ತಿಳಿಸಿದ್ದಾರೆ.

ಪಕ್ಷ ಬಿಡಬೇಕಾದರೆ ಸ್ವಕಾರಣ ಇರಬೇಕು ಇಲ್ಲವೇ ಪಕ್ಷದಿಂದ ಆಗಿರಬೇಕು. ಅದು ನನ್ನ ಕಡೆಯಿಂದ ಆಗಿದ್ದರೆ ಪಕ್ಷ ಸ್ಪಷ್ಟವಾಗಿ ಹೇಳಬೇಕು. ಒಂದು ರಾಷ್ಟ್ರೀಯ ಪಕ್ಷ ತೊರೆಯಲು ಬಲವಾದ ಕಾರಣ ಇರಬೇಕು. ಈ ಬಗ್ಗೆ ಪಕ್ಷದ ನಾಯಕರನ್ನು ಭೇಟಿ ಮಾಡಿ ನಿರ್ಧಾರ ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದ್ದಾರೆ.

ಇಷ್ಟು ವರ್ಷ ನಡೆದ ರಾಜಕೀಯ ಧೋರಣೆಗಳು ಈಗಿನ ಪರಿಸ್ಥಿತಿಗೆ ಕಾರ. 1989ರಲ್ಲಿ ಕಾಂಗ್ರೆಸ್ ಬಿ ಫಾರಂ ಕೊಟ್ಟು ನಂತರ ಬೇಋಎಯವರಿಗೆ ಕೊಟ್ಟಿದ್ದರು. ನಂತರ 2019ರಲ್ಲಿ ಹಾಲಿ ಸಂಸದನಾಗಿದ್ದರೂ ನಿಲ್ಲಲು ಅವಕಾಶ ಕೊಡಲಿಲ್ಲ. ನಾಲ್ಕು ಬಾರಿ ಚುನಾವಣೆಗೆ ಸ್ಪರ್ಧೆ ಮಾಡುವುದನ್ನು ತಪ್ಪಿಸಲಾಗಿದೆ. ನಾನು ಅತ್ಯಂತ ಕ್ರಿಯಾಶೀಲನಾಗಿ ಪಕ್ಷ ಸಂಘಟನೆ ಮಾಡಿದ್ದೇನೆ. ಪಕ್ಷಕ್ಕೆ ನನ್ನದೇ ಆದ ಅಳಿಲು ಸೇವೆ ಸಲ್ಲಿಸಿದ್ದೇನೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ನನ್ನ ಸೇವೆಯೂ ಇದೆ. ನನ್ನ ಕ್ರಿಯಾಶೀಲ ರಾಜಕೀಯ ನಿಂತಿಲ್ಲ ಎಂದು ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಮುಖಂಡ ಎಂ.ಡಿ.ಲಕ್ಷ್ಮೀನಾರಾಯಣ್ ಕೂಡ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!