ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ ವಿಸ್ತರಣೆ

ತುಮಕೂರು.: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು 2022-23ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ, ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗಾಗಿ ನೇರಸಾಲ, ಸ್ವಯಂ ಉದ್ಯೋಗ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆಯಲ್ಲಿ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ ಈ ಯೋಜನೆಗಳಡಿ ಅರ್ಹ ಫಲಾಪೇಕ್ಷಿಗಳಿಂದ ಆನ್ ಲೈನ್ ಅರ್ಜಿಗಳನ್ನು ಸೇವಾಸಿಂಧು (Sevasindhu) ಪೋರ್ಟಲ್ – https://sevasindhuservices.karnataka.gov.in ಅಥವಾ ಗ್ರಾಮ ಒನ್ ಅಥವಾ ಬೆಂಗಳೂರು ಒನ್ ಕರ್ನಾಟಕ ಒನ್ ಕೇಂದ್ರಗಳಲ್ಲಿ ದಿನಾಂಕ: 15.09.2022ರವರೆಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ.

ಫಲಾಪೇಕ್ಷಿಗಳು ಆನ್ಲೈನ್ ಮೂಲಕ ದಿ: 15.09.2022ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಯೋಜನೆಗಳ ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್ಸೈಟ್ https://kmvstdcl.karnataka.gov.in ಮೂಲಕ ಪಡೆದುಕೊಳ್ಳುವುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಹೆಚ್‌. ಶ್ರೀನಿವಾಸ ತಿಳಿಸಿದ್ದಾರೆ.


 

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!