ಸೆ: 8: ದೊಡ್ಡಬಳ್ಳಾಪುರ ಜನೋತ್ಸವ ಸಮಾವೇಶಕ್ಕೆ ತುಮಕೂರು ಜಿಲ್ಲೆಯ 30 ಸಾವಿರ ಭಾಗಿ : ಹೆಚ್‌ಎಸ್.ರವಿಶಂಕರ್ ಹೆಬ್ಬಾಕ


ಸೆ
ತುಮಕೂರು : ರಾಜ್ಯ ಬಿಜೆಪಿ ಸರ್ಕಾರದ ಜನಪ್ರಿಯ ಯೋಜನೆ , ಸಾಧನೆಯನ್ನು ತಿಳಿಸುವ ಬೃಹತ್ ಜನೋತ್ಸವ ಸಮಾವೇಶ ದೊಡ್ಡ ಬಳ್ಳಾಪುರದಲ್ಲಿ ಇದೇ 8 ರ ಗುರುವಾರ ಮಧ್ಯಾಹ್ನ 12 ಘಂಟೆಗೆ ನಡೆಯಲಿದ್ದು, ಜಿಲ್ಲೆಯ ಮುವತ್ತರಿಂದ
ಮೂವತೈದು ಸಾವಿರ ಕಾರ್ಯಕರ್ತರು ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿಸಲಿದ್ದಾರೆಂದು ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೆಬ್ಬಾಕ ಹೇಳಿದರು.

ಇಂದು ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ , ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ನೇತ್ರತ್ವ ವಹಿಸಿರುವ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ನೇತ್ರತ್ವದ ಸರ್ಕಾರ ಒಂದು ವರ್ಷ ಯಶಸ್ವಿಯಾಗಿ ಅಭಿವೃದ್ಧಿ ಪಥದಲ್ಲಿ ಪೂರ್ಣಗೊಳಿಸಿರುವ ಸಂಧರ್ಭದಲ್ಲಿ ಸರ್ಕಾರದಿಂದ ವಿವಿಧ ಇಲಾಖೆಗಳ ಮೂಲಕ ವಿವಿಧ ಯೋಜನೆಗಳ ಫಲಾನುಭವಿಗಳು ಮತ್ತು ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಅಧಿಕಾರಾವಧಿ ಪೂರೈಸಿದ್ದರ ಹಿನ್ನೆಲೆಯಲ್ಲಿ ಬೃಹತ್ ಜನೋತ್ಸವ ಸಮಾವೇಶ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಈ ಬೃಹತ್ ಜನೋತ್ಸವ ಸಮಾವೇಶಕ್ಕೆ ತುಮಕೂರು , ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರದ ಮೂರು ಲಕ್ಷ ಕಾರ್ಯಕರ್ತರು , ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿಸಿರುವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷ ರಾದ ಜೆ.ಪಿ.ನಡ್ಡಾ ಆಗಮಿಸಿ , ಸಂದೇಶ ನೀಡಲಿದ್ದಾರೆ. ಇವರ ಜೊತೆ ರಾಜಾಧ್ಯಕ್ಷ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ , ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣ , ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ , ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ , ಕೇಂದ್ರ ಹಾಗೂ ರಾಜ್ಯದ ಮಂತ್ರಿಗಳು , ಸಂಸದರು, ಶಾಸಕರು , ಪದಾಧಿಕಾರಿಗಳು, ಪ್ರಮುಖರು ಭಾಗವಹಿಸಲಿದ್ದಾರೆಂದು ಹೆಚ್.ಎಸ್.ರವಿಶಂಕರ್ ಹೆಬ್ಬಾಕ ಮಾಹಿತಿ ನೀಡಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೈ.ಹೆಚ್‌.ಹುಚ್ಚಯ್ಯ, ಪ್ರಧಾನ ಕಾರ್ಯದರ್ಶಿ ಹೆಚ್.ಟಿ.ಭೈರಪ್ಪ , ವಕ್ತಾರ ಕೆ.ಪಿ.ಮಹೇಶ , ಸಹ ವಕ್ತಾರ ಟಿ.ಜೆ.ಸನತ್ , ಮಾಧ್ಯಮ ಸಹ ಪ್ರಮುಖ್ ಜೆ.ಜಗದೀಶ್ , ಓಬಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ವೇದಮೂರ್ತಿ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ರಕ್ಷಿತ್ ಉಪಸ್ಥಿತರಿದ್ದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!