ಸೆ.8 ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವಕ್ಕೆ ಮಧುಗಿರಿ ಜಿಲ್ಲೆಯಿಂದ 18 ಸಾವಿರ ಜನರು ಬಾಗಿ

ಮಧುಗಿರಿ: ಸೆ.8 ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಕೆ.ಮಂಜುನಾಥ್ ತಿಳಿಸಿದರು.

ಪಟ್ಟಣದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡಿರುವ ಅನೇಕ ಜನಪರ ಯೋಜನೆಗಳ ಬಗ್ಗೆ ಹಾಗೂ ಸಾಧನೆ ಬಗ್ಗೆ ಜನತೆಗೆ ತಿಳಿಸುವ ಉದ್ದೇಶದಿಂದ ರಾಜ್ಯದಲ್ಲಿ ೭ ಕಡೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ದೊಡ್ಡಬಳ್ಳಾಪುರದಲ್ಲಿ ನಡೆಯುವ ಮೊದಲ ಜನೋತ್ಸವ ಕಾರ್ಯಕ್ರಮಕ್ಕೆ ಮಧುಗಿರಿ ಜಿಲ್ಲೆಯಿಂದ 18 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಬಸವರಾಜು ಭೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ ಹಾಗೂ ಕೇಂದ್ರ ಸಚಿವರುಗಳು ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸುಮಾರು ೧೫೦ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲ್ಲಿದ್ದು, ನಮ್ಮ ಕಾರ್ಯಕರ್ತರು ಸರ್ಕಾರ ನೀಡಿರುವ ಅನೇಕ ಜನಪರ ಯೋಜನೆಗಳ ಬಗ್ಗೆ ಜನತೆಗೆ ತಿಳಿಸಲು ಶ್ರಮ ವಹಿಸಬೇಕಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಮ್ಮಜ್ಜ, ಜಯಣ್ಣ, ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮಿಪತಿ, ವಿಜಯಕುಮಾರ್, ಕಾರ್ಯದರ್ಶಿ ಲತಾ ಪ್ರದೀಪ್, ತಾಲೂಕು ಮಂಡಲ ಅಧ್ಯಕ್ಷ ಪಿ.ಎಲ್.ನರಸಿಂಹಮೂರ್ತಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್, ಜಿಲ್ಲಾ ಎಸ್.ಸಿ ಮೋರ್ಚಾ ಉಪಾಧ್ಯಕ್ಷ ಮಂಜುನಾಥ, ಕಾರ್ಯದರ್ಶಿ ಲಕ್ಷ್ಮಿಪತಿ, ಮಾಧ್ಯಮ ಪ್ರಮುಖ್ ಆದಿಶೇಷ ಗುಪ್ತ, ಪದಾಧಿಕಾರಿಗಳಾದ ರವಿ, ಶ್ರೀಧರ್, ಶಿವಕುಮಾರ್ ಹಾಗೂ ಮುಂತಾದವರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!