ಸೆ.11ದರವರೆಗೆ ಗುಡುಗು ಸಹಿತ ಮತ್ತೆ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್

ಬೆಂಗಳೂರು : ಕರ್ನಾಟಕದಾದ್ಯಂತ ಮಳೆ ಕಡಿಮೆ ಆಗುವ ಲಕ್ಷಣಗಳು ಕಾಣುತ್ತಲೇ ಇಲ್ಲ. ದಿನದಿಂದ ದಿನಕ್ಕೆ ಮುಂಗಾರು ಚುರುಕುಗೊಳ್ಳುತ್ತಲೇ ಇದೆ. ಇದೀಗ ರಾಜ್ಯದಲ್ಲಿ ಮತ್ತೆ 20 ಸೆಂ.ಮೀ.ಗೂ ಹೆಚ್ಚು ಮಳೆ ಬೀಳಲಿದ್ದು, ‘ರೆಡ್ ಅಲರ್ಟ್’ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಎಲ್ಲ ಭಾಗದಲ್ಲೂ ಮುಂದಿನ 5 ದಿನ (ಸೆ.11)ಗಳವರೆಗೆ ಗುಡುಗು ಸಹಿತ ಜೋರು ಮಳೆಯ ನಿರೀಕ್ಷೆ ಇದೆ. ಈ ಪೈಕಿ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸುಮಾರು 20 ಸೆಂ. ಮೀ. ಗಿಂತ ಹೆಚ್ಚು ಮಳೆ ಆಗಲಿದೆ. ಮೂರು ಜಿಲ್ಲೆಗಳಿಗೆ ಸೆ.8ರಂದು ಮಾತ್ರ ‘ರೆಡ್ ಅಲರ್ಟ್’ ಕೊಡಲಾಗಿದೆ.

ಇನ್ನೂ ಉಳಿದ ದಿನ ಕರಾವಳಿ ಮೂರು ಜಿಲ್ಲೆಗಳು, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಹಾಗೂ ಒಂದೆರಡು ದಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಈ ಪ್ರದೇಶಗಳಲ್ಲಿ ಗುಡುಗು ಸಹಿತ ಅಬ್ಬರ ಮಳೆ ಬೀಳಲಿದೆ.

ಕೆಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್; ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ದಿನ ಬಿಟ್ಟು ದಿನ ಭಾರೀ ಮಳೆ ಸುರಿಯಲಿದೆ. ಹೀಗಾಗಿ ಇಷ್ಟು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.

ಮುಂದಿನ 48ಗಂಟೆಯಲ್ಲಿ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಸಲ ಹಗುರದಿಂದ ಸಾಧಾರಣ ಮಳೆ, ಇಲ್ಲವೇ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ನಗರದ ಕೆಲವು ಪ್ರದೇಶಗಳಲ್ಲಿ ಕೆಲವೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಈ ಅವಧಿಯಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 19 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆ ಇದೆ.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!